ಉದ್ಯೋಗಿಯಿಂದಲೇ ಬ್ಯಾಂಕ್‌ನಲ್ಲಿ ಗುಂಡಿನ ದಾಳಿ – 5 ಮಂದಿ ಸಾವು, 9 ಮಂದಿಗೆ ಗಾಯ

Public TV
1 Min Read

ನ್ಯೂಯಾರ್ಕ್‌: ಅಮೆರಿಕದ ಗುಂಡಿನ (US Shoot) ದಾಳಿಗಳು ಸಾಮಾನ್ಯ ಎನ್ನುವಂತಾಗಿಬಿಟ್ಟಿದೆ. ಇಲ್ಲಿನ ಕೆಂಟುಕಿಯ ಲೂಯಿಸ್‌ವಿಲ್ಲೆಯಲ್ಲಿರುವ ಬ್ಯಾಂಕ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದು, ಒಂಭತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೂಯಿಸ್‌ವಿಲ್ಲೆ ಮೆಟ್ರೋ ಪೊಲೀಸ್ ಇಲಾಖೆಯ ಹಂಗಾಮಿ ಮುಖ್ಯಸ್ಥ ಜಾಕ್ವೆಲಿನ್ ಗ್ವಿನ್-ವಿಲ್ಲರೊಯೆಲ್, ಗುಂಡಿನ ದಾಳಿ ನಡೆಸಿದ್ದ ಬಂದೂಕುಧಾರಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಭಾರತದಲ್ಲಿ ಚೆನ್ನಾಗೇ ಇದ್ದಾರೆ: ಪಾಶ್ಚಿಮಾತ್ಯ ದೇಶಗಳ ವಿರುದ್ಧ ಸೀತಾರಾಮನ್ ಕಿಡಿ

ಬ್ಯಾಂಕ್‌ನಲ್ಲಿ ಗುಂಡಿನ ದಾಳಿಯಾಗುತ್ತಿದೆ ಎಂದು ಬಗ್ಗೆ ಪೊಲೀಸರಿಗೆ ಕರೆಬಂದಿತ್ತು. ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಪ್ಪಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಐವರು ಮೃತಪಟ್ಟಿದ್ದಾರೆ.

ಶೂಟರ್, 23 ವರ್ಷದ ಕಾನರ್ ಸ್ಟರ್ಜನ್ ಎಂದು ಗುರುತಿಸಲಾಗಿದೆ. ಈತ ಬ್ಯಾಂಕ್‌ ಉದ್ಯೋಗಿಯಾಗಿದ್ದ. ತಾನು ಕೆಲಸ ಮಾಡುತ್ತಿದ್ದ ಓಲ್ಡ್ ನ್ಯಾಷನಲ್ ಬ್ಯಾಂಕ್‌ನಲ್ಲೇ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡಿನ ದಾಳಿಯಲ್ಲಿ ಜೋಶುವಾ ಬ್ಯಾರಿಕ್, ಥಾಮಸ್ ಎಲಿಯಟ್, ಜೂಲಿಯಾನಾ ಫಾರ್ಮರ್, ಜೇಮ್ಸ್ ಟಟ್ ಹತ್ಯೆಗೀಡಾಗಿದ್ದಾರೆ. ಮತ್ತೊಬ್ಬರ ಗುರುತು ಸಿಕ್ಕಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Twitter ನಲ್ಲಿ ಮೋದಿ ಫಾಲೋ ಮಾಡ್ತಿರುವ ಮಸ್ಕ್‌ – ಭಾರತಕ್ಕೆ ಬರುತ್ತೆ ಟೆಸ್ಲಾ ಎಂದ ನೆಟ್ಟಿಗರು!

ಇಬ್ಬರು ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಏಳು ಮಂದಿ ನಾಗರಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪೈಕಿ ಮೂವರು ಚಿಕಿತ್ಸೆ ಪಡೆದು ಡಿಸ್ಚಾರ್ಜ್‌ ಆಗಿದ್ದಾರೆ. ಪೊಲೀಸ್‌ ಅಧಿಕಾರಿ ಸೇರಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article