ಟೆನ್ನಿಸ್ ಆಟಗಾರ್ತಿಯನ್ನು ಕೊಂದ ಅಪ್ಪನಿಗೆ 14 ದಿನ ನ್ಯಾಯಾಂಗ ಬಂಧನ

Public TV
2 Min Read

ಚಂಡೀಗಢ: ಟೆನ್ನಿಸ್ ಆಟಗಾರ್ತಿ (Tennis Player) ಮಗಳನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆ ದೀಪಕ್ ಯಾದವ್‌ನನ್ನು (Deepak Yadav) ಗುರುಗ್ರಾಮ ನ್ಯಾಯಾಲಯ (Gurugram Court) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ದೀಪಕ್‌ನನ್ನು ಬಂಧಿಸಿದ ಗುರುಗ್ರಾಮ ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ದೀಪಕ್ ಯಾದವ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿತು. ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಯಗೊಂಡಿದ್ದ ಹೆಣ್ಣು ಚೀತಾ ಸಾವು

ರಾಜ್ಯ ಮಟ್ಟದ ಟೆನ್ನಿಸ್ ಆಟಗಾರ್ತಿ ರಾಧಿಕಾಳನ್ನು (25) ಜುಲೈ 10 ರಂದು ಗುರುಗ್ರಾಮದಲ್ಲಿರುವ ಮನೆಯಲ್ಲಿ ತಂದೆ ದೀಪಕ್ ಯಾದವ್ ರಿವಾಲ್ವರ್‌ನಿಂದ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಇದನ್ನೂ ಓದಿ: ಏಕಕಾಲದಲ್ಲಿ ಚುನಾವಣೆ ನಡೆಸುವುದು ಸಂವಿಧಾನದ ಮೂಲ ರಚನೆಯನ್ನ ಉಲ್ಲಂಘಿಸುವುದಿಲ್ಲ: ಡಿ.ವೈ ಚಂದ್ರಚೂಡ್

ಪೊಲೀಸರ ಪ್ರಕಾರ, ದೀಪಕ್ ಯಾದವ್ ಅವರ ಊರಾದ ವಜೀರಾಬಾದ್‌ಗೆ ತೆರಳಿದ್ದ ಸಂದರ್ಭ ಗ್ರಾಮಸ್ಥರು ಮತ್ತು ಗೆಳೆಯರು ಅವರನ್ನು ನಿಂದಿಸಿದ್ದರು. ಇದರಿಂದ ದೀಪಕ್  ಕೋಪಗೊಂಡಿದ್ದರು. ಅವರ ಗೆಳೆಯರು, ಸಂಬಂಧಿಕರು ದೀಪಕ್ ತಮ್ಮ ಮಗಳ ಟೆನಿಸ್ ಅಕಾಡೆಮಿಯಿಂದ ಪಡೆಯುವ ಆದಾಯದಿಂದ ಬದುಕುತ್ತಿದ್ದಕ್ಕಾಗಿ ಅಪಹಾಸ್ಯ ಮಾಡಿದ್ದರು. ಇದರಿಂದ ದೀಪಕ್ ಯಾದವ್ ಮಗಳ ಮೇಲೆ ಕೋಪಗೊಂಡಿದ್ದರು. ಮಗಳಿಗೆ ಟೆನಿಸ್ ಅಕಾಡೆಮಿ ಮುಚ್ಚುವಂತೆ ಅನೇಕ ಬಾರಿ ಹೇಳಿದ್ದರು. ಆದರೆ, ಆಕೆ ಒಪ್ಪಿರಲಿಲ್ಲ. ಇದೇ ವಿಷಯದ ಜಗಳದಿಂದ ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ಗುನ್ನಾ – ವಾರ್ಷಿಕ 40 ಲಕ್ಷ ವಹಿವಾಟು ಮೀರಿದ್ರೆ GST ಫಿಕ್ಸ್

ತಂದೆ ತನ್ನ ಮಗಳ ವೃತ್ತಿಜೀವನ ಮತ್ತು ಗಳಿಕೆಯ ಬಗ್ಗೆ ಸಾಮಾಜಿಕ ಟೀಕೆಗಳಿಂದಾಗಿ ಕಳೆದ 15 ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಗುರುವಾರ ಮಗನನ್ನು ಹಾಲು ತರಲೆಂದು ಮನೆಯಿಂದ ಆಚೆ ಕಳುಹಿಸಿ ಅಡುಗೆ ಮಾಡುತ್ತಿದ್ದ ಮಗಳ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 5 ಹುಲಿಗಳ ಸಾವು ಪ್ರಕರಣ – ಕಾರ್ಬೋಫುರಾನ್ ಕೀಟನಾಶಕ ಬಳಕೆ: ಸಿಸಿಎಫ್ ಹೀರಾಲಾಲ್

Share This Article