ಹಳಿತಪ್ಪಿದ ಗುವಾಹಟಿ-ಬಿಕನೇರ್‌ ಎಕ್ಸ್‌ಪ್ರೆಸ್‌ ರೈಲು – ಮೂವರು ದುರ್ಮರಣ

Public TV
1 Min Read

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದೊಮೊಹಾನಿ ಬಳಿ ಗುವಾಹಟಿ-ಬಿಕನೇರ್‌ ಎಕ್ಸ್‌ಪ್ರೆಸ್‌ ರೈಲು ಹಳಿತಪ್ಪಿದ್ದು, ಮೂವರು ಧಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಮೂವರ ಸಾವಿಗೀಡಾಗಿದ್ದು, ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡಿದ್ದ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ 30 ಆಂಬುಲೆನ್ಸ್‌ಗಳು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧ

ಅಪಘಾತ ಕುರಿತು ಉನ್ನತ ಮಟ್ಟದ ರೈಲ್ವೆ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ. ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಡಿಜಿ ದೆಹಲಿಯಿಂದ ಅಪಘಾತ ಸ್ಥಳಕ್ಕೆ ತೆರಳಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ 5 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ 25,000 ರೂ. ಪರಿಹಾರ ಘೋಷಿಸಲಾಗಿದೆ. ಇದನ್ನೂ ಓದಿ: ನಟಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ – ನಟ ದಿಲೀಪ್‌ ಮನೆ ಮೇಲೆ ಕೇರಳ ಪೊಲೀಸರ ದಾಳಿ

ರೈಲಿನ ಕನಿಷ್ಠ ಐದು ಬೋಗಿಗಳು ಹಳಿತಪ್ಪಿವೆ. ಒಂದು ಬೋಗಿ ಮಗುಚಿ ಬಿದ್ದಿದೆ ಎಂದು ಈಶಾನ್ಯ ಫ್ರಾಂಟಿಯರ್‌ ರೈಲ್ವೆ ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *