ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

Public TV
1 Min Read

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ (Gyanesh Kumar) ಬುಧವಾರ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಚುನಾವಣಾ ಆಯುಕ್ತ ಸುಖಬೀರ್ ಸಿಂಗ್ ಸಂಧು (Sukhbir Singh Sandhu), ಜ್ಞಾನೇಶ್ ಕುಮಾರ್‌ರನ್ನು ಅಭಿನಂದಿಸಿದರು.

ಅಧಿಕಾರ ಸ್ವೀಕಾರದ ಬಳಿಕ ಪ್ರತಿಕ್ರಿಯಿಸಿದ ಜ್ಞಾನೇಶ್ ಕುಮಾರ್ ಅವರು, ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನ. ಆದ್ದರಿಂದ ೧೮ ವರ್ಷಗಳನ್ನು ಪೂರೈಸಿದ ಭಾರತದ ಪ್ರತಿಯೊಬ್ಬ ನಾಗರಿಕನು ಮತದಾರರಾಗಬೇಕು ಮತ್ತು ಯಾವಾಗಲೂ ಮತ ಚಲಾಯಿಸಬೇಕು. ಭಾರತದ ಸಂವಿಧಾನ, ಚುನಾವಣಾ ಕಾನೂನುಗಳು, ನಿಯಮಗಳು ಮತ್ತು ಅದರಲ್ಲಿ ನೀಡಲಾದ ಸೂಚನೆಗಳಿಗೆ ಅನುಗುಣವಾಗಿ, ಭಾರತದ ಚುನಾವಣಾ ಆಯೋಗವು ಮತದಾರರೊಂದಿಗೆ ಇತ್ತು, ಇದೆ ಮತ್ತು ಯಾವಾಗಲೂ ಇರುತ್ತದೆ ಎಂದರು. ಇದನ್ನೂ ಓದಿ: ಅರ್ಹತೆ ಇಲ್ಲದೇ ಬಿಪಿಎಲ್ ಕಾರ್ಡ್ ಪಡೆದವರಿಗೆ ದಂಡ ಪ್ರಯೋಗ: ಮುನಿಯಪ್ಪ

ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಎಂಬ ಹೆಗ್ಗಳಿಕೆಗೆ ಜ್ಞಾನೇಶ್ ಕುಮಾರ್ ಪಾತ್ರರಾಗಿದ್ದಾರೆ. ಚುನಾವಣಾ ಆಯುಕ್ತ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರು| ಜೆಸಿಬಿ ಹರಿದು 2 ವರ್ಷದ ಮಗು ಸಾವು

Share This Article