ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ – ನ್ಯಾಯಾಧೀಶರ ವಿರುದ್ಧ ವಕೀಲನಿಂದ ಅವಹೇಳನಕಾರಿ ಪೋಸ್ಟ್

Public TV
1 Min Read

ರಾಮನಗರ: ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಹಿಂದೂಗಳ ಪೂಜೆಗೆ ಅವಕಾಶ ನೀಡಿದ ವಿಚಾರವಾಗಿ ನ್ಯಾಯಾಧೀಶರ ವಿರುದ್ಧ ವಕೀಲನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾನೆ.

ರಾಮನಗರದ (Ramanagara) ಐಜೂರಿನ ವಕೀಲ ಚಾನ್ ಪಾಷಾ ಉತ್ತರ ಪ್ರದೇಶದ ವಾರಣಾಸಿ ಜಿಲ್ಲಾ ನ್ಯಾಯಾಧೀಶರ (Varanasi District Judge) ಬಗ್ಗೆ ಆವಹೇಳನಕಾರಿಯಾಗಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ. ಪೋಸ್ಟ್‌ನಲ್ಲಿ ನ್ಯಾಯಾಧೀಶರ ವಿರುದ್ಧ ನಾಲಾಯಕ್, ಚಡ್ಡಿ ನ್ಯಾಯಾಧೀಶ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದೀಗ ವಕೀಲನ ವಿರುದ್ಧ ಹಿಂದೂ ಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

ವಕೀಲನ ವಿರುದ್ಧ ಕಾನೂನು ಕ್ರಮವಹಿಸುವಂತೆ ಹಿಂದೂ ಪರ ಸಂಘಟನೆಗಳ ಸದಸ್ಯರು ಆಗ್ರಹಿಸಿದ್ದಾರೆ. ಈ ಸಂಬಂಧ ಹಿಂದೂ ಸಂಘಟನೆಗಳ ನಿಯೋಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ. ಆತನನ್ನು ಬಂಧಿಸುವಂತೆ ನಿಯೋಗ ಒತ್ತಾಯಿಸಿದೆ. ಅಲ್ಲದೇ ರೌಡಿಶೀಟರ್ ಹಿನ್ನೆಲೆ ಹೊಂದಿರುವ ಚಾನ್ ಪಾಷಾನನ್ನು ಗಡಿಪಾರು ಮಾಡುವಂತೆ ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಜ್ಞಾನವಾಪಿ ಮಸೀದಿಯಲ್ಲಿ ಪುರಾತತ್ವ ಇಲಾಖೆ ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಮಸೀದಿ ನಿರ್ಮಾಣ ಆಗಿರುವುದು ಮಂದಿರದ ಮೇಲೆ ಎಂಬ ಸತ್ಯ ಬಯಲಾಗಿತ್ತು. ಇದರ ಬೆನ್ನಲ್ಲೇ ವಾರಣಾಸಿ ನ್ಯಾಯಾಲಯ ( District Court Varanasi) ಜ.31ರಂದು ನೀಡಿದ್ದ ಆದೇಶದಲ್ಲಿ ನೆಲ ಮಹಡಿಯಲ್ಲಿರುವ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ ನೀಡಿತ್ತು. ಇದನ್ನೂ ಓದಿ: ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲ್ಲ- ಮುಸ್ಲಿಂ ಸಮಿತಿ ಮನವಿ ತಿರಸ್ಕರಿಸಿದ ಹೈಕೋರ್ಟ್‌

Share This Article