ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ರೆ ಬೆಲೆ ಇಲ್ಲ: ದೇವೇಗೌಡ

Public TV
2 Min Read

ತುಮಕೂರು: ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ರೆ ಬೆಲೆ ಇಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.

ಪರಿಷತ್ ಚುನಾವಣೆ ಹಿನ್ನೆಲೆ, ತುಮಕೂರು ತಾಲೂಕಿನ ಬಳಗೆರೆಯ ಶಾಸಕ ಗೌರಿಶಂಕರ್ ನಿವಾಸದಲ್ಲಿ ದೇವೇಗೌಡರು ಸುದ್ದಿಗೋಷ್ಠಿ ನಡೆಸಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮತ್ತು ಪರಿಷತ್ ಚುನಾವಣೆಯ ಬಗ್ಗೆ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿಗೆ ಇರುವಂತಹ ಕಷ್ಟ ಒಂದು ಮಾತಲ್ಲಿ ಹೇಳೋಕೆ ಆಗಲ್ಲ. ಇಡೀ ಪ್ರಪಂಚವನ್ನ ಪೀಡಿಸ್ತಿರೋ ಕೊರೊನಾನ ಎದುರಿಸೋದು ಅಷ್ಟು ಸುಲಭ ಅಲ್ಲ. ನಮ್ಮ ದೇಶ ಚಿಕ್ಕ ದೇಶವಲ್ಲ, 130 ಕೋಟಿ ಜನಸಂಖ್ಯೆ ಇರೋ ದೇಶವಾಗಿದೆ. ಕೋವಿಡ್ ನಿರ್ವಹಣೆಯಲ್ಲಿ ಆರ್ಥಿಕ ಅವ್ಯವಹಾರ ಇದೆ ಎಂದು ಅಧಿಕೃತ ವಿರೋಧ ಪಕ್ಷ ಇದರ ಬಗ್ಗೆ ವ್ಯಾಖ್ಯಾನ ಮಾಡ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ರಸ್ತೆ ಗುಂಡಿ – ಎಎಪಿಯಿಂದ ಬೃಹತ್ ಸಹಿ ಸಂಗ್ರಹ ಅಭಿಯಾನ ಆರಂಭ

ಎಂಎಲ್ ಸಿ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಅನಿಲ್‍ಕುಮಾರ್ ಅವರನ್ನು ಸ್ಪರ್ಧೆಗೆ ನಿಲ್ಲಿಸಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾಯಿತ ಮತದಾರರನ್ನು ಭೇಟಿಯಾಗುತ್ತಿದ್ದೇವೆ. 7 ಕ್ಷೇತ್ರಗಳಲ್ಲಿ ಮಾತ್ರ ನಾವು ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲರೂ ಚುನಾವಣೆಯಲ್ಲಿ ಗೆಲ್ಲಲೇ ಬೇಕು. ಶಾಸಕರು, ಮಾಜಿ ಶಾಸಕರು, ಮುಖಂಡರು ಎಲ್ಲರು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕ್ಷೇತ್ರಗಳಲ್ಲಿ ಬಹಳ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇವೆ. ವಿಜಯಪುರದಲ್ಲಿ 890, ಗುಲ್ಬರ್ಗಾದಲ್ಲಿ ಸಾವಿರ ಚಿಲ್ಲರೆ ವೋಟ್ ಗಳಿವೆ. ಬೀದರ್ ನಲ್ಲಿ 490, ರಾಯಚೂರಿನಲ್ಲಿ 890 ವೋಟ್ ಗಳಿವೆ. ಧಾರವಾಡ, ಗದಗ, ಹಾವೇರಿಯಲ್ಲಿ ವೋಟ್ ಗಳಿವೆ. ಅಲ್ಲಿ ನಾವು ಅಭ್ಯರ್ಥಿಗಳನ್ನು ಹಾಕಲು ಸಾಧ್ಯವಾಗಿಲ್ಲ. ಇಲ್ಲಿ ಕಾಂಗ್ರೆಸ್, ಬಿಜೆಪಿ ಅವರಿಗೆ ಹೆಚ್ಚಿನ ಮತಗಳಿವೆ. ಭಾನುವಾರ ಸಭೆ ನಡೆಸಿ ಧಾರವಾಡ, ಗದಗ ಹಾವೇರಿಯಲ್ಲಿ ಮತಗಳನ್ನು ಯಾರಿಗೆ ಕೊಡಬೇಕು ಎಂದು ತಿಳಿಸುತ್ತೇವೆ ಎಂದು ಹೇಳಿದರು.

ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ರೆ ಬೆಲೆ ಇಲ್ಲ. ಇಲ್ಲಿ ಬಿಜೆಪಿ ಕಾಂಗ್ರೆಸ್ ಅವರು ಸತ್ಯವಂತರು ಎಂದು ಹೇಳೋರು ಇದ್ದರೆ ಚರ್ಚೆ ಮಾಡೋಣ. ಮಣ್ಣಿನಮಗ ಅಂತಾ ನನ್ನ ತಂದೆ ನನಗೆ ನಾಮಕರಣ ಮಾಡಿಲ್ಲ. ಯಾರು ನಾಮಕರಣ ಮಾಡಿದ್ರೋ ನನಗೆ ಗೊತ್ತಿಲ್ಲ. ಯಾರು ಹೇಳಿದ್ರೋ, ಯಾವಾಗ ಹೇಳಿದ್ರೋ ಗೊತ್ತಿಲ್ಲ. ಅದನ್ನ ಹೇಳಿಕೊಂಡು ಬರ್ತಿದ್ದಾರೆ, ಯಾರು ಅಂತಾ ಹುಡುಕಲಿ. ಹೀಗೆ ಹೇಳಿ ಅಂತಾ ನಾನು ಯಾರಿಗಾದರೂ ಹೇಳಿದ್ದೀನಾ. ಜನರಿಗೆ ನನ್ನ ಮೇಲೆ ಪ್ರೀತಿ ಹಾಗೂ ಹೋರಾಟದ ಮೇಲೆ ನಂಬಿಕೆಯಿಂದ ಹಾಗೆ ಕೂಗ್ತಾರೆ ಎಂದರು. ಇದನ್ನೂ ಓದಿ: ಸಾಮಾನ್ಯ ವ್ಯಕ್ತಿಯಲ್ಲ ಶಿವರಾಂ, ಅವರಂತೆ ಯಾರು ಮತ್ತೆ ಹುಟ್ಟಿ ಬರಲು ಸಾಧ್ಯವಿಲ್ಲ: ದ್ವಾರಕೀಶ್

ಮಾಜಿ ಸಿಎಂ ಕುಮಾರಸ್ವಾಮಿ ಅವರು ಆ ಭಾಗದ ಮುಖಂಡರ ಸಭೆ ನಡೆಸಲಿದ್ದಾರೆ. ಯಾರಿಗೆ ಬೆಂಬಲ ನೀಡಬೇಕು ಎಂದು ಭಾನುವಾರ ತೀರ್ಮಾನ ಮಾಡುತ್ತೇವೆ. ತುಮಕೂರು ಜಿಲ್ಲೆಯ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದೇನೆ. ಈ ಚುನಾವಣೆಯಲ್ಲಿ ಸ್ವಂತ ಶಕ್ತಿಯಿಂದ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

 

Share This Article
Leave a Comment

Leave a Reply

Your email address will not be published. Required fields are marked *