ಪಂಚೆ ಹಾಕಿಕೊಂಡು ಶೋ ಮಾಡಿದವರು ರೈತರಲ್ಲ – ಡಿಕೆಶಿ ವಿರುದ್ಧ ಎಚ್‍ಡಿಕೆ ಪರೋಕ್ಷ ವಾಗ್ದಾಳಿ

Public TV
2 Min Read

-ಏನ್ ಪಂಚೆ ಹಾಕಿದವರೆಲ್ಲ ರೈತರ ಮಕ್ಕಳಾಗ್ತಾರಾ

ರಾಮನಗರ: ಈ ರಾಜ್ಯಕ್ಕೆ ಗೊತ್ತಿದೆ ಕುಮಾರಸ್ವಾಮಿ ಕೊಡುಗೆ ಏನೆಂದು ಗೊತ್ತಿದೆ. ನೀರಾವರಿ ವಿಚಾರವಾಗಿ ದೇವೇಗೌಡರ ಕೊಡುಗೆ ಏನೆಂದು ಗೊತ್ತಿದೆ. ಮೊನ್ನೆ ಹಾಸನದಲ್ಲಿ ಹೇಳಿದ್ದಾರೆ ಏನ್ ಪಂಚೆ ಹಾಕಿದವರೆಲ್ಲ ರೈತರ ಮಕ್ಕಳಾಗ್ತಾರಾ, ನಾವು ಪಂಚೆ ಹಾಕಿದ್ದೇವೆ ನಾವು ರೈತರು ಎಂದಿದ್ದಾರೆ. ಪಂಚೆ ಹಾಕಿಕೊಂಡು ಶೋ ಮಾಡಿದವರು ರೈತರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ  ಮಾಜಿ ಮುಖ್ಯಮಂತ್ರಿ ಎಚ್‍.ಡಿ ಕುಮಾರಸ್ವಾಮಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಬಿಡದಿಯ ಕೇತಗಾನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಎದೆ ಮೇಲೆ ಬೋರ್ಡ್ ಹಾಕಿಕೊಂಡಿಲ್ಲ ರೈತರ ಮಕ್ಕಳು ಎಂದು. ಜನರೇ ಅವರವರ ಕಾರ್ಯ ನೋಡಿ ಬಿರುದು ಕೊಡ್ತಾರೆ. ಪಂಚೆ ಹಾಕಿಕೊಂಡು ಶೋ ಮಾಡಿದವರು ರೈತರಾಗಲ್ಲ. ಈಗ ನೋಡಿದ್ದೇವೆ ನಾವು ತಲಕಾವೇರಿಯಲ್ಲಿ ಎಲ್ಲರನ್ನೂ ದೂರ ಕಳುಹಿಸಿ ಕಾವೇರಿ ನೀರಿಗೆ ಅಕ್ಷತೆ ಹಾಕೋದನ್ನು. ಮೆಟ್ಟಿಲಿಗೆ ನಮಸ್ಕಾರ ಮಾಡಿಕೊಂಡಿದನ್ನು ನೋಡಿದ್ದೇವೆ. ಇದು ನರೇಂದ್ರ ಮೋದಿಯವರನ್ನು ನೋಡಿ ಕಾಪಿ ಮಾಡಿದ್ದಾರೆ ಎಂದು ಡಿಕೆಶಿ ಹೆಸರು ಬಳಸದೇ ಎಚ್‍ಡಿಕೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೊಡಗಿನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

ಇದೆಲ್ಲವೂ ಆರ್ಟಿಫಿಷಿಯಲ್ ಹೋರಾಟಗಳು ನಡಿಯಲ್ಲ. ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಹೋರಾಟ ನೋಡಿಲ್ವ. ಕೃಷ್ಣೆಯ ನೀರನ್ನು ಇವರು ಉಳಿಸಿದ್ದನ್ನು ನೋಡಿದ್ದೇವೆ. ಈಗ ಮೇಕೆದಾಟು ಹೋರಾಟ ಮಾಡುತ್ತಿದ್ದಾರೆ. ಪಾದಯಾತ್ರೆ ಮೂಲಕ ಸ್ವಾಮೀಜಿಗಳನ್ನು ಪಾದಯಾತ್ರೆಗೆ ಕರೆಯುತ್ತಿದ್ದಾರೆ. ಹೋಗಿ ದೆಹಲಿಯಲ್ಲಿ ಉಪವಾಸ ಕುಳಿತುಕೊಳ್ಳಿ ಕೇಂದ್ರ ಸರ್ಕಾರದ ಮುಂದೆ. ಇದು ಜನರನ್ನು ಪರಿವರ್ತನೆ ಮಾಡುವ ಸಲುವಾಗಿ ಹೋರಾಟ ಅಲ್ಲ ಮತಕ್ಕಾಗಿ ನಡೆಯುತ್ತಿರುವ ಪಾದಯಾತ್ರೆ ಅಷ್ಟೇ ಆದರೆ ಎಲ್ಲಾ ಸಂದರ್ಭದಲ್ಲಿಯೂ ಜನರನ್ನು ಪರಿವರ್ತಿಸಲು ಆಗಲ್ಲ. ಅದಕ್ಕೆ ಮೂಲ ಉದ್ದೇಶ ಇರಬೇಕು ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಡಿಕೆಶಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಪ್ರಶಾಂತ್ ಸಂಬರ್ಗಿ ವಿರುದ್ಧ FIR ದಾಖಲು

ಬಿಡದಿ ಪುರಸಭೆಗೆ ಮತದಾನ ಮಾಡಿದ ಕುಮಾರಸ್ವಾಮಿ, ಈ ಬಾರಿ ಚುನಾವಣೆಗೆ ಭಾರೀ ಪೈಪೋಟಿ ಇತ್ತು. ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ತಾರೆ. ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ತಾರೆ. ಎರಡು ದಿನಗಳ ಕಾಲ ಪ್ರಚಾರ ನಡೆಸಿದ್ದೇನೆ. ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ಹೀಗಾಗಿ ಮತದಾರರು ಕೈ ಹಿಡಿಯುತ್ತಾರೆ. 20ಕ್ಕಿಂತ ಅಧಿಕ ಸ್ಥಾನದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದಿ ಹೇರಿಕೆ ವಿಚಾರವಾಗಿ ಮಾತನಾಡಿ, ಪದೇ ಪದೆ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರದ ನಿಲುವು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮನೋಭಾವದ ಬಗ್ಗೆ ಮೊದಲಿನಿಂದಲೂ ವಿರೋಧಿಸಿದ್ದೇನೆ. ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸುವ ಹುನ್ನಾರ ನಡೆಯುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಬೇಕು. ರಾಜ್ಯದ ಜನರು ಸಹ ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಬೇಕಿದೆ. ಕನ್ನಡ ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡಬೇಕಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಇದು ಹೆಚ್ಚುತ್ತಿದೆ. ಹಿಂದಿ ಹೇರಿಕೆ ವಿಚಾರವಾಗಿ ಕೇಂದ್ರದ ನಿಲುವು ಖಂಡಿಸುತ್ತೇನೆ. ಕನ್ನಡ ಭಾಷೆಯ ಮೇಲೆ ಅವಮಾನ ಮಾಡಬೇಡಿ. ಕನ್ನಡಿಗರ ಸ್ವಾಭಿಮಾನವನ್ನು ಕೆಣಕಬೇಡಿ. ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *