ಕಾಂಗ್ರೆಸ್ ಸರ್ಕಾರ ಕದ್ದುಮುಚ್ಚಿ ತಮಿಳುನಾಡಿಗೆ ನೀರು ಹರಿಸುತ್ತಿದೆ: ಹೆಚ್‍ಡಿಕೆ ಗರಂ

Public TV
1 Min Read

– ಶನಿವಾರ ತಮಿಳುನಾಡಿಗೆ 4000 ಕ್ಯೂಸೆಕ್‌ ನೀರು ಹರಿಸಿದ್ದಕ್ಕೆ ಟೀಕೆ

ಬೆಂಗಳೂರು: ತನ್ನ ತಲೆಗೇ ಹರಳೆಣ್ಣೆ ಇಲ್ಲ, ಪಕ್ಕದವನಿಗೆ ಸಂಪಂಗೆಣ್ಣೆ ಕೊಟ್ಟನಂತೆ ನಿಮ್ಮಂಥವನೊಬ್ಬ, ನಿಮ್ಮ ವೈಖರಿ ಹಾಗಿದೆ. ಕನ್ನಡಿಗರು ಬರದ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮ್ಮ ಸರ್ಕಾರ ಕದ್ದುಮುಚ್ಚಿ ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುತ್ತಿದೆ. ಒಂದು ಕೈಲಿ ಅಗ್ಗದ ಗ್ಯಾರಂಟಿ ಕೊಟ್ಟು ಹತ್ತು ಕೈಗಳಲ್ಲಿ ಬದುಕಿನ ಗ್ಯಾರಂಟಿ ಕಿತ್ತುಕೊಳ್ಳುತ್ತಿದ್ದೀರಿ. ಇದು ನ್ಯಾಯವೇ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ.

ಬಜೆಟ್‍ನಲ್ಲಿ ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಘೋಷಣೆ ಮಾಡಿದ್ದೀರಿ, ಸರಿ, ದುಡ್ಡು ಎಲ್ಲಿಟ್ಟಿದ್ದೀರಿ? ನಾನು 2019ರ ಬಜೆಟ್ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ರೂ. ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏಕೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಕ್ಷೇತ್ರದ ಮುಖಂಡರ ಸಭೆ ನಡೆಸಿದ ಕುಮಾರಸ್ವಾಮಿ; ಕ್ಷೇತ್ರಕ್ಕೆ ಬನ್ನಿ ಎಂಬ ಒತ್ತಾಯ ತಿರಸ್ಕರಿಸಿದ ಹೆಚ್ಡಿಕೆ, ನಿಖಿಲ್

ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯನವರೇ, ಕೊನೆಗೂ ಸತ್ಯ ನುಡಿದಿದ್ದೀರಿ. ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ. ಸುಳ್ಳುರಾಮಯ್ಯನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು. ವೋಟಿಗಾಗಿ ಗ್ಯಾರಂಟಿ ಸಮಾವೇಶ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಸೋಮಣ್ಣಗೆ ತುಮಕೂರು ಕ್ಷೇತ್ರದ ಟಿಕೆಟ್ ನೀಡದಂತೆ ರಸ್ತೆ ತಡೆದು ಆಕ್ರೋಶ

Share This Article