ರಾಜ್ಯದಲ್ಲಿರೋದು ಬಿಜೆಪಿ ಸರ್ಕಾರ, RSS, VHP, ಬಜರಂಗದಳವಲ್ಲ: ಹೆಚ್.ವಿಶ್ವನಾಥ್ ಕಿಡಿ

Public TV
2 Min Read

ನವದೆಹಲಿ: ರಾಜ್ಯದಲ್ಲಿ ಸರ್ಕಾರ ಇರುವುದು ಬಿಜೆಪಿಯದ್ದು, RSS, VHP ಬಜರಂಗದಳದಲ್ಲ, ಸಂವಿಧಾನ ಮೀರಿ ವರ್ತಿಸುತ್ತಿರುವ ಕೆಲವು ಸಂಘಟನೆಗಳ ವಿರುದ್ಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕ್ರಮ ತೆಗೆದುಕೊಳ್ಳಬೇಕು ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ನಾನು ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಆದರೆ ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಂದ ಬೇಸರವಾಗಿದೆ. ನಾನು ಬಿಜೆಪಿಯನ್ನು ಪ್ರತಿನಿಧಿಸುತ್ತೇನೆ. ಹಾಗಂತ ಎಲ್ಲವನ್ನೂ ನೋಡಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದರು.

ಹಿಜಬ್‍ನಿಂದ ಆರಂಭವಾಗಿ ಈಗ ಪಠ್ಯಪುಸ್ತಕವನ್ನೇ ತಿರುಚಲಾಗುತ್ತಿದೆ. ರೋಹಿತ್ ಚಕ್ರತೀರ್ಥ ಹಿನ್ನೆಲೆ ಏನು?, ಎಷ್ಟು ವರ್ಷ ಪಾಠ ಮಾಡಿದ್ದಾರೆ? ಅವರಿಗೆ ಇತಿಹಾಸ ಎಷ್ಟು ಗೊತ್ತಿದೆ..? ಕೇವಲ ಕೆಲವು ನಾಯಕರ ಪರ ಕೆಲಸ ಮಾಡಿದರು ಎನ್ನುವ ಕಾರಣಕ್ಕೆ ಅವರನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿ ನೇಮಿಸಿದ್ದಾರೆ. ಅವರು ಇಂದು ಟಿಪ್ಪು ಸುಲ್ತಾನ್ ಒಂದು ಇತಿಹಾಸ ಬದಲಿಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಲಾಲ್ ಧಾರ್ಮಿಕ ಆಚರಣೆ, ಇದರಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ: ಬಿ.ಸಿ ನಾಗೇಶ್

tippu

ಟಿಪ್ಪು ಸುಲ್ತಾನ್ ವೀರ ಸೇನಾನಿ, ಸೂರ್ಯ – ಚಂದ್ರ ಇರುವವರೆಗೂ ಟಿಪ್ಪು ಸುಲ್ತಾನ್ ಇರ್ತಾರೆ, ಇತಿಹಾಸ ಬದಲಿಸಲು ಯಾರಿಂದಲು ಸಾಧ್ಯವಿಲ್ಲ. ಟಿಪ್ಪು, ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷ್ ವಿರುದ್ಧ ಮೊದಲು ಧ್ವನಿ ಎತ್ತಿದ್ದವರು. ಅವರ ಬಗ್ಗೆ ಬೇಕಾಬಿಟ್ಟಿ ಮಾತನಾಡುವುದು ಸರಿಯಲ್ಲ. ಇತಿಹಾಸ ತಿರುಚುವುದು ಒಳ್ಳೆ ಬೆಳವಣಿಗೆಯಲ್ಲ ಎಂದು ಹಳ್ಳಿಹಕ್ಕಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಿಮಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬೇಡಿ: ಸಿಎಂಗೆ ಹೆಚ್‍ಡಿಕೆ ಸವಾಲ್

ಬೊಮ್ಮಾಯಿ ಕ್ರಮ ತೆಗೆದುಕೊಳ್ಳಬೇಕು: ಈ ನಡುವೆ ಸಮುದಾಯದ ಒಂದಕ್ಕೆ ದೇವಸ್ಥಾನ ಬಳಿ ವ್ಯಾಪಾರ ಮಾಡಬೇಡಿ. ಹಲಾಲ್ ಮಾಡಬೇಡಿ ಎನ್ನುವುದು ಸರಿಯಲ್ಲ. ಸಮಾಜದಲ್ಲಿ ಇದು ಘಾಸಿ ಮಾಡುತ್ತದೆ. ಕೆಲವು ಸಂಘಟನೆಗಳು ಹದ್ದು ಮೀರಿ ವರ್ತಿಸುತ್ತಿವೆ. ಜನರಿಂದ ಆಯ್ಕೆಯಾದ ಸರ್ಕಾರ ಮಧ್ಯಪ್ರವೇಶ ಮಾಡಬೇಕು. ನಾನು ಸರ್ಕಾರಕ್ಕೆ ಆಗ್ರಹಕ್ಕೆ ಮಾಡುತ್ತೇನೆ, ಬೊಮ್ಮಾಯಿ ಅವರು ಕ್ರಮ ತೆಗೆದುಕೊಳ್ಳಬೇಕು ಶಾಂತಿಯನ್ನು ಕಾಪಡಬೇಕು. ಬಿ.ಎಸ್ ಯಡಿಯೂರಪ್ಪ ಅವರು ಕೂಡಾ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು ಇದೇ ವೇಳೆ ವಿಶ್ವನಾಥ್ ಒತ್ತಾಯಿಸಿದರು. ಇದನ್ನೂ ಓದಿ: ಚಪ್ಪಲಿ ಏಟು ತಿನ್ನಬಹುದು ಆದರೆ, ದುಡ್ಡೇಟು ತಿನ್ನೋಕೆ ಆಗಲ್ಲ: ಡಿ.ಕೆ ಶಿವಕುಮಾರ್

SIDDARAMAIAH

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ: ದೊಡ್ಡ ದೊಡ್ಡ ಹಿರಿಯ ನಾಯಕರು ಧರ್ಮ ಜಾತಿ ಆಧರದ ಮೇಲೆ ಮಾತನಾಡುತ್ತಿದ್ದಾರೆ. ನಾವು ಹೀಗೆ ಮಾತನಾಡಿದರೆ ಯುವ ಪೀಳಿಗೆಗೆ ಯಾರು ಪಾಠ ಹೇಳಿಕೊಡುತ್ತಾರೆ. ನಿನ್ನೆ ಸದನದಲ್ಲೂ ಬ್ರಾಹ್ಮಣರು ಏನು ಮಾಡಿದ್ದಾರೆ ಎಂದು ನಾಯಕರೊಬ್ಬರು ಕೇಳಿದ್ದಾರೆ. 43 ವರ್ಷಗಳ ಬ್ರಾಹ್ಮಣ ಸಮುದಾಯದ ಹೊಸ ರೂಪ, ಹೊಸ ಮೆರೆಗು ನೀಡಿದ್ದಾರೆ. ಹೊಸ ಕಾರ್ಯಕ್ರಮಗಳ ಮೂಲಕ ಅಭಿವೃದ್ಧಿ ಪೂರಕ ಕೆಲಸ ಮಾಡಿದ್ದಾರೆ ಲಘುವಾಗಿ ಮಾತನಾಡಬಾರದು ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *