ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಒಪ್ಪಿಗೆ

Public TV
1 Min Read

– ಗಾಜಾ ಮೇಲಿನ ಬಾಂಬ್‌ ದಾಳಿ ತಕ್ಷಣವೇ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್‌ ಸೂಚನೆ

ಗಾಜಾ: ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ (Hamas) ಕೊನೆಗೂ ಒಪ್ಪಿಕೊಂಡಿದೆ. ಹಮಾಸ್‌ ಘೋಷಣೆ ಬೆನ್ನಲ್ಲೇ, ಗಾಜಾ ಮೇಲೆ ಬಾಂಬ್‌ ದಾಳಿ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್‌ (Donald Trump) ಹೇಳಿದ್ದಾರೆ.

ಭಾನುವಾರದ ಒಳಗೆ ಹಮಾಸ್‌ ಒತ್ತೆಯಾಳುಗಳ ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಟ್ರಂಪ್‌ ಖಡಕ್‌ ಎಚ್ಚರಿಕೆ ನೀಡಿದ್ದರು. ಬಳಿಕ ಟ್ರಂಪ್ ಅವರ 20 ಅಂಶಗಳ ಯೋಜನೆಗೆ ಶುಕ್ರವಾರ ಪ್ಯಾಲೆಸ್ಟೀನಿಯನ್ ಉಗ್ರಗಾಮಿ ಗುಂಪು ತನ್ನ ಪ್ರತಿಕ್ರಿಯೆಯನ್ನು ನೀಡಿದೆ. ಇದನ್ನೂ ಓದಿ: ಪಾಕ್‌ನ ಪೇಶಾವರದಲ್ಲಿ ಬಾಂಬ್ ಸ್ಫೋಟ – 9 ಮಂದಿ ಸಾವು, ನಾಲ್ವರಿಗೆ ಗಾಯ

ಗಾಜಾದಲ್ಲಿ ಶಾಂತಿ ಸ್ಥಾಪಿಸುವ ಏಕೈಕ ಸಾಮರ್ಥ್ಯವಿರುವ ವ್ಯಕ್ತಿ ಎಂದು ಟ್ರಂಪ್ ಬಿಂಬಿಸಿಕೊಂಡಿದ್ದಾರೆ. ಗಾಜಾ ಮೇಲಿನ ದಾಳಿಯಲ್ಲಿ ಸಾವಿರಾರು ಜನರನ್ನು ಬಲಿ ತೆಗೆದುಕೊಂಡ ಮತ್ತು ಅಮೆರಿಕದ ಮಿತ್ರ ಇಸ್ರೇಲ್‌ ಜಾಗತಿಕ ವೇದಿಕೆಯಲ್ಲಿ ಏಕಾಂಗಿಯಾಗಿದೆ. ಈಗ ಅದರ ಎರಡು ವರ್ಷಗಳ ಯುದ್ಧವನ್ನು ಕೊನೆಗೊಳಿಸಲು ಟ್ರಂಪ್‌ ಪ್ರಯತ್ನಿಸಿದ್ದಾರೆ.

ಇಸ್ರೇಲ್ (Israel) ಗಾಜಾದ ಮೇಲೆ ಬಾಂಬ್ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು. ಇದರಿಂದ ನಾವು ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಮತ್ತು ತ್ವರಿತವಾಗಿ ಹೊರಗೆ ಕರೆತರಬಹುದು ಎಂದು ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ವೇದಿಕೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅ.9 ರಂದು ಭಾರತಕ್ಕೆ ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ ಭೇಟಿ

ಟ್ರಂಪ್‌ ಅವರ ನಿಲುವನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ ನಿಗದಿಪಡಿಸಿದ ತತ್ವಗಳಿಗೆ ಅನುಗುಣವಾಗಿ ಯುದ್ಧವನ್ನು ಕೊನೆಗೊಳಿಸಲು ನೆತನ್ಯಾಹು ಮತ್ತು ಅವರ ತಂಡದೊಂದಿಗೆ ಇಸ್ರೇಲ್‌ ಸಂಪೂರ್ಣ ಸಹಕಾರದೊಂದಿಗೆ ಕೆಲಸ ಮಾಡುತ್ತಿದೆ ಎಂದು ನೆತನ್ಯಾಹು ಅವರ ಕಚೇರಿ ತಿಳಿಸಿದೆ.

Share This Article