ಗಾಜಾದಲ್ಲಿ ಇಸ್ರೇಲ್ ವಾಯುದಾಳಿಗೆ ಹಮಾಸ್ ರಾಜಕೀಯ ನಾಯಕ ಬಲಿ

Public TV
1 Min Read

ಜೆರುಸಲೇಂ: ಗಾಜಾದ (Gaza) ಖಾನ್‌ ಯೂನಿಸ್‌ನಲ್ಲಿ ಇಸ್ರೇಲ್‌ (Israeli) ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ (Hamas) ರಾಜಕೀಯ ನಾಯಕ ಸಲಾಹ್‌ ಅಲ್‌-ಬರ್ದವೀರ್‌ ಹತ್ಯೆಯಾಗಿದೆ.

ದಾಳಿಯಲ್ಲಿ ಸಲಾಹ್ ಅಲ್-ಬರ್ದವೀಲ್ ಅವರ ಪತ್ನಿಯೂ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಪರ ಮಾಧ್ಯಮಗಳನ್ನು ಉಲ್ಲೇಖಿಸಿ ದಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಗಾಜಾ ಪಟ್ಟಿಯಾದ್ಯಂತ ಹಮಾಸ್ ಭದ್ರಕೋಟೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ಮಿಲಿಟರಿ ಕಾರ್ಯಾಚರಣೆಯ ಭಾಗವಾಗಿತ್ತು. ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಮಾತುಕತೆಗಳು ಸಫಲವಾಗಿಲ್ಲ. ಮಾರ್ಚ್‌ 19 ರಿಂದ ಜಾರಿಯಲ್ಲಿದ್ದ ಕದನ ವಿರಾಮವನ್ನು ಮುರಿದ ನಂತರ ಮಿಲಿಟರಿ ಕಾರ್ಯಾಚರಣೆ ನಡೆದಿದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಇಸ್ರೇಲಿ ಸರ್ಕಾರವು, ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದೆ. ಅಮೆರಿಕದ ರಾಯಭಾರಿ ಸ್ಟೀವ್ ವಿಟ್ಕಾಫ್ ಮಧ್ಯಸ್ಥಿಕೆಯಲ್ಲಿ ಪ್ರಸ್ತಾವನೆಗಳನ್ನು ತಿರಸ್ಕರಿಸಿದೆ.

ಹಮಾಸ್ ವಿರುದ್ಧದ ದಾಳಿಗಳನ್ನು ತೀವ್ರಗೊಳಿಸುವಂತೆ ಇಸ್ರೇಲ್ ರಕ್ಷಣಾ ಪಡೆಗಳಿಗೆ (IDF) ನೆತನ್ಯಾಹು ನಿರ್ದೇಶನ ನೀಡಿದ್ದಾರೆ. ಇನ್ಮುಂದೆ ಇಸ್ರೇಲ್, ಹಮಾಸ್ ವಿರುದ್ಧ ಮಿಲಿಟರಿ ಬಲವನ್ನು ಹೆಚ್ಚಿಸುವ ಮೂಲಕ ಕಾರ್ಯನಿರ್ವಹಿಸುತ್ತದೆ ಎಂದು ನೆತನ್ಯಾಹು ಕಚೇರಿ ತಿಳಿಸಿದೆ.

Share This Article