ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವಾಗ ಬೆಂಕಿ, ತಪ್ಪಿತು ಅನಾಹುತ

1 Min Read

ಬಳ್ಳಾರಿ: ಹಂಪಿ ಉತ್ಸವಕ್ಕೆ(Hampi Utsava) ಸಿಎಂ ಸಿದ್ದರಾಮಯ್ಯ (CM Siddaramaiah) ಚಾಲನೆ ನೀಡುವಾಗ ಬೆಂಕಿ (Fire) ಹೊತ್ತಿಕೊಂಡ ಘಟನೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ಅವರಿದ್ದ ಮುಖ್ಯ ವೇದಿಕೆಯ ಎದುರೇ ಬೆಂಕಿ ಹೊತ್ತಿಕೊಂಡಿದೆ. ಉತ್ಸವದಲ್ಲಿ ಭಾಗಿಯಾಗಲು ಸಿಎಂ ಬಂದ ಸಮಯದಲ್ಲಿ ಪಟಾಕಿ ಸಿಡಿಸಲಾಗಿತ್ತು. ಈ ವೇಳೆ ಬೆಂಕಿ ಕಿಡಿಗಳು ಹುಲ್ಲು ಹಾಗೂ ಸಮೀಪದ ವಸ್ತುಗಳಿಗೆ ತಗುಲಿ ಅವಘಡ ಸಂಭವಿಸಿದೆ.

ವೇದಿಕೆಯ ಸಮೀಪವೇ ಬೆಂಕಿ ಮತ್ತು ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ನೆರೆದಿದ್ದ ಸಾವಿರಾರು ಪ್ರೇಕ್ಷಕರು ಹಾಗೂ ಗಣ್ಯರು ಒಂದು ಕ್ಷಣ ಆತಂಕಗೊಂಡಿದ್ದರು. ಆದರೆ ಸ್ಥಳದಲ್ಲಿ ಮೊದಲೇ ನಿಯೋಜನೆಗೊಂಡಿದ್ದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ಟಿಪ್ಪರ್‌ನಲ್ಲಿ ಶಾಲಾ ಮಕ್ಕಳ ಪ್ರವಾಸ – ವಾಹನ ಚಾಲಕರ ವಿರುದ್ಧ ಎಫ್‌ಐಆರ್

ಹಂಪಿ ಉತ್ಸವ–2026 ಇಂದಿನಿಂದ ಆರಂಭವಾಗಿದ್ದು ಸಿದ್ದರಾಮಯ್ಯ ಅವರು ಶುಕ್ರವಾರ ರಾತ್ರಿ ಚಾಲನೆ ನೀಡಿದರು. ಸಿದ್ದರಾಮಯ್ಯ ಡೊಳ್ಳು, ನಗಾರಿ ಬಾರಿಸುವ ಮೂಲಕ ಹಂಪಿ ಉತ್ಸವವನ್ನು ಉದ್ಘಾಟಿಸಿದರು.

3 ದಿನಗಳ ಕಾಲ ನಡೆಯುವ ಹಂಪಿ ಉತ್ಸವದಲ್ಲಿ ಬೈ ಸ್ಕೈ, ಎತ್ತುಗಳ ಪ್ರದರ್ಶನ, ರಂಗೋಲಿ ಸ್ಪರ್ಧೆ, ಫಲ ಪುಷ್ಪ ಪ್ರದರ್ಶನ, ಮತ್ಸ್ಯ ಮೇಳ, ಬೋಟಿಂಗ್, ಹಂಪಿ ಇತಿಹಾಸ ಕುರಿತು ವಿಚಾರ ಸಂಕಿರಣ, ಆಹಾರ ಮೇಳ, ಡ್ರೋನ್ ಪ್ರದರ್ಶನ, ಗ್ರಾಮೀಣ ಕ್ರೀಡೆಗಳು, ಕವಿಗೋಷ್ಠಿ, ಗಾಳಿಪಟ ಪ್ರದರ್ಶನ, ಯುವ ಗೋಷ್ಠಿ, ಜಾನಪದ ವಾಹಿನಿ ಮತ್ತಿತರ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Share This Article