ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು ಮಕರ ಸಂಕ್ರಾಂತಿಯ (Makar Sankranti) ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದ್ದಾರೆ.
ಪತ್ರದ ಮೂಲಕ ಸಂಕ್ರಾಂತಿ ಮೋದಿ ಶುಭಾಶಯ ತಿಳಿಸಿದ್ದಾರೆ. ಆತ್ಮೀಯ ಸಹ ನಾಗರಿಕರೇ, ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ – ದಿವ್ಯಜ್ಯೋತಿ ದರ್ಶನಕ್ಕಾಗಿ ಕಾಯುತ್ತಿರುವ ಭಕ್ತಗಣ
ಪ್ರಧಾನಮಂತ್ರಿ ಶ್ರೀ @narendramodi ಅವರ ಸಂಕ್ರಾಂತಿ ಶುಭಾಶಯ ಪತ್ರ!
ಎಲ್ಲರ ಜೀವನದಲ್ಲಿ ಮುಂಬರುವ ದಿನಗಳು ಸಮೃದ್ಧಿ, ಸಕಾರಾತ್ಮಕತೆ ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ ಎಂದು ಪ್ರಧಾನಮಂತ್ರಿ ಅವರು ಹಾರೈಸಿದ್ದಾರೆ.@PMOIndia @PIB_India @MIB_India @DG_PIB @sjaju1 @DDNewslive @DDNational @DDChandanaNews… pic.twitter.com/rXw1aN9bKx
— PIB in Karnataka (@PIBBengaluru) January 14, 2026
ಪತ್ರದಲ್ಲೇನಿದೆ?
ಸೂರ್ಯನ ಪಥ ಬದಲಾವಣೆಯ ಹೊಸ ಆರಂಭವನ್ನು ಸೂಚಿಸುವ ಸಂಕ್ರಾಂತಿಯ ಭರವಸೆ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ. ದೇಶಾದ್ಯಂತ ವಿವಿಧ ರೂಪಗಳಲ್ಲಿ, ಆದರೆ ಅಷ್ಟೇ ಉತ್ಸಾಹದಿಂದ ಆಚರಿಸಲಾಗುವ ಈ ಹಬ್ಬವು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ನಮ್ಮನ್ನೆಲ್ಲ ಒಟ್ಟಾಗಿ ಬೆಸೆಯುವ ಒಗ್ಗಟ್ಟಿನ ಭಾವನೆಯನ್ನು ನೆನಪಿಸುತ್ತದೆ.
ಈ ಹಬ್ಬವು ನಮ್ಮ ರೈತರು ಮತ್ತು ಅವರ ಕುಟುಂಬಗಳ ಜೀವನದಲ್ಲಿ ವಿಶೇಷ ಸ್ಥಾನಮಾನ ಹೊಂದಿದೆ. ಇದು ನಮ್ಮ ಅನ್ನದಾತರಿಗೆ ಕೃತಜ್ಞತೆಯನ್ನು ಸಲ್ಲಿಸುವ ಮತ್ತು ಆ ಮೂಲಕ ನಮ್ಮ ಸಮಾಜವನ್ನು ಬಲಪಡಿಸುವ ಸಂದರ್ಭವಾಗಿದೆ.
ಸಂಕ್ರಾಂತಿಯು ನಮ್ಮನ್ನು ಆತ್ಮವಿಶ್ವಾಸ ಮತ್ತು ಆಶಾವಾದದೊಂದಿಗೆ ಮುನ್ನಡೆಯಲು ಪ್ರೋತ್ಸಾಹಿಸುತ್ತದೆ. ನಿಮ್ಮ ಮುಂದಿನ ದಿನಗಳು ಯಾವಾಗಲೂ ಸಮೃದ್ಧಿ, ಸಕಾರಾತ್ಮಕತೆ ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ. ನಿಮ್ಮ ಮನೆಯಲ್ಲಿ ಸಂತೋಷ ನೆಲೆಸಲಿ, ನಿಮ್ಮೆಲ್ಲಾ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ಸಮಾಜದಲ್ಲಿ ಸಾಮರಸ್ಯ ಮೂಡಲಿ ಎಂದು ಮೋದಿ ಆಶಿಸಿದ್ದಾರೆ. ಇದನ್ನೂ ಓದಿ: ಸಂಕ್ರಾಂತಿ ಭವಿಷ್ಯ – ಯಾವ ರಾಶಿಯವರಿಗೆ ಏನು?

