ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿರುವ ಪಕ್ಷೇತರ ಅಭ್ಯರ್ಥಿ

Public TV
1 Min Read

ಬೆಂಗಳೂರು: ವಿಜಯನಗರ (Vijayanagara) ಜಿಲ್ಲೆಯ ಹರಪನಹಳ್ಳಿ (Harapanahalli) ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂಪಿ ಲತಾ ಮಲ್ಲಿಕಾರ್ಜುನ್ (MP Latha Mallikarjun) ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಬೆಂಬಲ ಸೂಚಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ (Election) ಕಾಂಗ್ರೆಸ್‌ನಿಂದ (Congress) ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲತಾ ಮಲ್ಲಿಕಾರ್ಜುನ್ ಬಂಡಾಯವೆದ್ದು, ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಷ್ಟೇ ಅಲ್ಲದೇ ಅಲ್ಲಿನ ಹಾಲಿ ಶಾಸಕರಾಗಿದ್ದ ಬಿಜೆಪಿಯ ಜಿ.ಕರುಣಾಕರ ರೆಡ್ಡಿ ಅವರನ್ನು ಸೋಲಿಸಿ ಭರ್ಜರಿ ಗೆಲುವು ದಾಖಲಿಸಿದ್ದರು.

ಇದೀಗ ಪತಿ ಮಲ್ಲಿಕಾರ್ಜುನ ಜೊತೆ ಸೇರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕೆಲಕಾಲ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದ ಲತಾ ಮಲ್ಲಿಕಾರ್ಜುನ್, ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಆಟೋ ರಿಕ್ಷಾ, ಖಾಸಗಿ ಬಸ್ ಡಿಕ್ಕಿ – 6 ಮಹಿಳೆಯರು ಸಾವು, ನಾಲ್ವರಿಗೆ ಗಾಯ

ಕಾಂಗ್ರೆಸ್‌ನ ಹಿರಿಯ ನಾಯಕ ಮಾಜಿ ಡಿಸಿಎಂ ಎಂಪಿ ಪ್ರಕಾಶ್ ಪುತ್ರಿಯಾಗಿರುವ ಎಂಪಿ ಲತಾ ಮಲ್ಲಿಕಾರ್ಜುನ್‌ಗೆ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ, ಸಿದ್ದರಾಮಯ್ಯ ಅವರು ಕರೆ ಮಾಡಿ ಮಾತನಾಡಿರುವ ವಿಚಾರ ಜಿಲ್ಲೆಯಲ್ಲಿ ಬಹಳ ಸದ್ದು ಮಾಡಿತ್ತು. ಇದನ್ನೂ ಓದಿ: ಮುಂದಿನ ಸಿಎಂ ಯಾರು? – ರಾತ್ರಿ 1:30ರವರೆಗೆ ನಡೆದಿದ್ದು ಏನು?

Share This Article