ಪ್ರೀತಿಸುವಂತೆ ಯುವಕನಿಂದ ಕಿರುಕುಳ – ಅಪ್ರಾಪ್ತೆ ಆತ್ಮಹತ್ಯೆ, ಆರೋಪಿ ಬಂಧನ

Public TV
1 Min Read

ಕಲಬುರಗಿ: ಮುಸ್ಲಿಂ ಯುವಕನ (Muslim Youth) ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜೇವರ್ಗಿ ತಾಲೂಕಿನಲ್ಲಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 14 ವರ್ಷದ ಬಾಲಕಿಗೆ ಕಳೆದ ಹಲವು ದಿನಗಳಿಂದ ಆಟೋ ಚಾಲಕ ಮೆಹಬೂಬ್ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ, ಆತನ ಕಿರುಕುಳ ತಾಳಲಾರದೇ ನೇಣುಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಎಂದು ಘಟನೆಯನ್ನು ಖಂಡಿಸಿ ಜೇವರ್ಗಿ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದಿಂದ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದ್ದು, ಆರೋಪಿಯನ್ನು ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದ್ದು, ಈ ಕುರಿತು ಜೇವರ್ಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಮೆಹಬೂಬ್ ಬಂಧನ:
ಹಲವು ದಿನಗಳಿಂದ ಪ್ರೀತಿ ಮಾಡುವಂತೆ ಯುವತಿಗೆ ಕಿರುಕುಳ ನೀಡಿದ ಆರೋಪಿ ಮೆಹಬೂಬ್, ನನ್ನು ಪೋಲಿಸರು ಇದೀಗ ಬಂಧಿಸಿದ್ದಾರೆ. ಯುವಕನ ಕಿರುಕುಳದ ಕಾರಣಕ್ಕೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂಬುದು ಪ್ರತಿಭಟನಾಕಾರರ ಆಗ್ರಹವಾಗಿದೆ.

Share This Article