‘ಲಾಲ್ ಸಲಾಂ’ ತಂಡಕ್ಕೆ ಹಾರ್ಡ್ ಡಿಸ್ಕ್ ಸಂಕಷ್ಟ: ರಜನಿ ಮಗಳಿಗೆ ಶಾಕ್

Public TV
2 Min Read

ಜನಿಕಾಂತ್ ಪುತ್ರಿ ಐಶ್ವರ್ಯ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಲಾಲ್ ಸಲಾಂ’ ಸಿನಿಮಾದಲ್ಲಿ ರಜನಿ ಕೂಡ ವಿಶೇಷ ಪಾತ್ರವನ್ನು ನಿರ್ವಹಿಸಿದ್ದಾರೆ. ರಜನಿ ನಟನೆಯ ದೃಶ್ಯಗಳಿದ್ದ ವಿಡಿಯೋ ಕಾಣೆಯಾಗಿದೆ ಎಂದು ವರದಿಯಾಗಿದೆ. ಒಂದು ಕಡೆ ಹಾರ್ಡ್ ಡಿಸ್ಕ್ (Hard Disk) ಕಾಣಿಯಾಗಿದೆ ಎನ್ನುವ ಸುದ್ದಿ ಇದ್ದರೆ, ಇನ್ನೊಂದು ಕಡೆ ರಜನಿ ನಟನೆಯ ದೃಶ್ಯಗಳು ಡಿಲಿಟ್ ಆಗಿವೆ ಎಂದು ಹೇಳಲಾಗುತ್ತಿದೆ. ಎರಡರಲ್ಲಿ ಯಾವುದು ಸತ್ಯ ಎಂದು ಚಿತ್ರತಂಡ ಸ್ಪಷ್ಟ ಪಡಿಸದೇ ಇದ್ದರೂ, ಎರಡರಲ್ಲಿ ಒಂದಾದರೂ ಘಟನೆ ನಡೆದಿದ್ದರೆ ನಿಜಕ್ಕೂ ಅದು ಶಾಕ್ ಸಂಗತಿ.

ತಲೈವಾ ಹುಟ್ಟು ಹಬ್ಬಕ್ಕೆ ಟೀಸರ್

ಭಾರತೀಯ ಸಿನಿಮಾ ರಂಗದ ಖ್ಯಾತ ನಟ ರಜನಿಕಾಂತ್ ಅವರ ಹುಟ್ಟು ಹಬ್ಬಕ್ಕೆ ಲಾಲ್ ಸಲಾಂ ಸಿನಿಮಾದ ಟೀಸರ್ ರಿಲೀಸ್ (Teaser) ಮಾಡಲು ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಹೊರ ಬಿದ್ದಿದೆ. ಡಿಸೆಂಬರ್ 12ರಂದು ತಲೈವಾ ಹುಟ್ಟು ಹಬ್ಬ. ಅಂದೇ ರಜನಿಕಾಂತ್ ಪುತ್ರಿ ಐಶ್ವರ್ಯ (Aishwarya Rajinikanth) ನಿರ್ದೇಶನದ ಲಾಲ್ ಸಲಾಂ ಚಿತ್ರದ ಟೀಸರ್ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ.

ರಜನಿಕಾಂತ್ (Rajanikanth) ಸದ್ಯ ‘ಜೈಲರ್’ ಸಿನಿಮಾದ ಗೆಲುವಿನಲ್ಲಿದ್ದಾರೆ. ಇದರ ಜೊತೆ ಮಗಳು ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಂ’ (Lal Salam) ಚಿತ್ರದಲ್ಲಿ ಭಿನ್ನ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾದಲ್ಲಿನ ತಲೈವಾ ಲುಕ್ ರಿವೀಲ್ ಆಗಿತ್ತು.

ಲೈಕಾ ಪ್ರೋಡಕ್ಷನ್ಸ್ ಅಡಿಯಲ್ಲಿ ‘ಲಾಲ್ ಸಲಾಂ’ ಸಿನಿಮಾವನ್ನ ಐಶ್ವರ್ಯ ರಜನಿಕಾಂತ್ ನಿರ್ದೇಶನ ಮಾಡಿದ್ದಾರೆ. ತಲೈವಾ ಅವರು ಕೀ ರೋಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಮೊಹಿದ್ದೀನ್ ಭಾಯ್ ಪಾತ್ರಕ್ಕೆ ತಲೈವಾ ಜೀವತುಂಬಿದ್ದಾರೆ. ಗಲಭೆ ಹಿನ್ನೆಲೆ, ಶೆರ್ವಾನಿಯಲ್ಲಿ ಸನ್ ಗ್ಲ್ಯಾಸ್ ಧರಿಸಿ ನಡೆದು ಬರುತ್ತಿರುವ ತಲೈವಾ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ಭರ್ಜರಿಯಾಗಿ ನಡೆದಿದೆ. ಸದ್ಯ ಸಿನಿಮಾದ ಪೋಸ್ಟರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

1995ರಲ್ಲಿ ಬಂದಿದ್ದ ‘ಬಾಷಾ’ ಚಿತ್ರದಲ್ಲಿ ಜನಸ್ನೇಹಿ ಡಾನ್ ಆಗಿ ರಜನಿಕಾಂತ್ ಅಬ್ಬರಿಸಿದ್ದರು. ಅದೇ ಚಿತ್ರದ ಪಾತ್ರವನ್ನು ‘ಲಾಲ್ ಸಲಾಂ’ ಮೊಹಿದ್ದೀನ್ ಭಾಯ್ ನೆನಪಿಸುತ್ತಿರುವುದು ಸುಳ್ಳಲ್ಲ. ‘ಲಾಲ್ ಸಲಾಂ’ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಆಗಿದ್ದು ಕ್ರಿಕೆಟ್ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಲೀಡ್ ರೋಲ್‌ಗಳಲ್ಲಿ ನಟಿಸುತ್ತಿದ್ದಾರೆ. ಜೀವಿತಾ ರಾಜಶೇಖರ್ ನಾಯಕಿಯಾಗಿ ಮಿಂಚಲಿದ್ದಾರೆ. ವಿಷ್ಣು ರಂಗಸ್ವಾಮಿ ಛಾಯಾಗ್ರಹಣ- ಎಆರ್ ರೆಹಮಾನ್ ಸಂಗೀತ ಈ ಚಿತ್ರಕ್ಕಿದೆ. ರಜನಿಕಾಂತ್ ಕಾರಣಕ್ಕೆ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ.

 

ದಾಂಪತ್ಯ ಜೀವನದಲ್ಲಿ ಸೋತಿರೋ ಐಶ್ವರ್ಯಗೆ ಈ ಸಿನಿಮಾದಿಂದ ಬಿಗ್ ಬ್ರೇಕ್ ಬೇಕಾಗಿದೆ. ರಜನಿಕಾಂತ್ ಚಿತ್ರದಲ್ಲಿ ನಟಿಸುತ್ತಿರುವ ಕಾರಣ, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ರಿಲೀಸ್ ಬಳಿಕ ಸಿನಿಮಾಗೆ ಯಾವ ರೀತಿ ರೆಸ್ಪಾನ್ಸ್ ಸಿಗಲಿದೆ ಕಾದುನೋಡಬೇಕಿದೆ.

Share This Article