ಅಂಗಡಿಗೆ ನುಗ್ಗಿ, ಗುಂಡು ಹಾರಿಸಿ ಹಣ ದೋಚಿದ ಖದೀಮರು

Public TV
2 Min Read

ನವದೆಹಲಿ: ಹಾರ್ಡ್‍ವೇರ್ ಅಂಗಡಿಯೊಂದಕ್ಕೆ ದುಷ್ಕರ್ಮಿಗಳು ನುಗ್ಗಿ ಬಂದೂಕಿನಿಂದ ಅಂಗಡಿಯಲ್ಲಿದ್ದ ವ್ಯಕಿಗೆ ಬೆದರಿಸಿ ನಗದು ಮತ್ತು ಬೆಲೆ ಬಾಳುವ ವಸ್ತುಗಳನ್ನು ದೋಚಿರುವ ಘಟನೆ ದೆಹಲಿಯ ಖೇರಾ ಖುರ್ದ್ ಪ್ರದೇಶದಲ್ಲಿ ನಡೆದಿದೆ.

delhi hardware shop

ಶನಿವಾರ ಈ ಘಟನೆ ನಡೆದಿದ್ದು, ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಈ ಕುರಿತಂತೆ ಪೊಲೀಸರು ಬೈಕ್‍ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮುಖ ಮುಚ್ಚಿಕೊಂಡು ಅಂಗಡಿಗೆ ಪ್ರವೇಶಿ ಅಂಗಡಿಯಲ್ಲಿದ್ದ ವ್ಯಕ್ತಿಗೆ ಹಣ ನೀಡುವಂತೆ ಬೆದರಿಕೆಯೊಡ್ಡಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದಾಗ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಟಾಟಾ ಉತ್ಪನ್ನದ ಗೋದಾಮಿಗೆ ಆಕಸ್ಮಿಕ ಬೆಂಕಿ – ದಿನ ಬಳಕೆಯ ವಸ್ತುಗಳು ಬೆಂಕಿಗಾಹುತಿ

delhi hardware shop

ಈ ಬಗ್ಗೆ ಉತ್ತರ ದೆಹಲಿ ಜಿಲ್ಲೆಯ ಉಪಪೊಲೀಸ್ ಆಯುಕ್ತ ರಾಜೀವ್ ರಂಜನ್ ಸಿಂಗ್, ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದ್ದು, ಅವರ ಪತ್ತೆಗಾಗಿ ದೆಹಲಿಯ ಹಲವು ಪೊಲೀಸರ ತಂಡ ಹಗಲಿರುಳು ಶ್ರಮಿಸುತ್ತಿದ್ದಾರೆ. ಅಲ್ಲದೇ ಆರೋಪಿಗಳು ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡಿದ್ದು, ಹೆಲ್ಮೆಟ್ ಧರಿಸಿ ಅಂಗಡಿಗೆ ಪ್ರವೇಶಿಸಿದ್ದರು. ಸದ್ಯ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಘಟನೆ ವೇಳೆ ಅಂಗಡಿಯಲ್ಲಿದ್ದ ವ್ಯಕ್ತಿಯನ್ನು ಬಿಟ್ಟು ಬೇರೆ ಯಾರೂ ಗಾಯಗೊಂಡಿಲ್ಲ ಎಂದಿದ್ದಾರೆ. ಇದನ್ನೂ ಓದಿ:  ಸಲ್ಲು ತುಟಿಗೆ ಮುತ್ತಿಡಲು ಗಳಗಳನೇ ಕಣ್ಣೀರಿಟ್ಟಿದ್ದ ನಟಿ ಭಾಗ್ಯ ಶ್ರೀ

ಆರೋಪಿಗಳು ಮೊದಲಿಗೆ ಅಂಗಡಿಯೊಳಗೆ ಪ್ರವೇಶಿಸಿ ಅಲ್ಲಿದ್ದ ಗ್ರಾಹಕರು ಮತ್ತು ಸಿಬ್ಬಂದಿಗೆ ಬೆದರಿಕೆಯೊಡ್ಡಿ, ನಂತರ ಕ್ಯಾಶ್ ಕೌಂಟರ್‌ನ ಡ್ರಾಯರ್‌ನಲ್ಲಿ ಹುಡುಕಾಡಿದ್ದಾರೆ. ಕೊನೆಗೆ ಅಂಗಡಿಯಲ್ಲಿದ್ದ ವ್ಯಕ್ತಿಗೆ ಬಂದೂಕು ತೋರಿಸಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದ ವ್ಯಕ್ತಿ ಕಾಲಿಗೆ ಗುಂಡು ಹಾರಿಸಿರುವುದನ್ನು ದೃಶ್ಯಾವಳಿಯಲ್ಲಿ ಕಾಣಬಹುದು. ನಂತರ ಆರೋಪಿಗಳು ಹಣ ಮತ್ತು ಬೆಲೆ ಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದಾರೆ. ಇದೀಗ ಘಟನೆ ವೇಳೆ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *