ಗುಜರಾತ್‌ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್‌ ಪಟ್ಟ

Public TV
2 Min Read

– ನೂತನ ಡಿಸಿಎಂ ಆಗಿ ಹರ್ಷ ಸಾಂಘ್ವಿ ಪ್ರಮಾಣ ಸ್ವೀಕಾರ

ಗಾಂಧಿನಗರ: ಗುಜರಾತ್‌ನಲ್ಲಿಂದು (Gujarat) ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ (Harsh Sanghavi) ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೇ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ (Rivaba Jadeja) ಸೇರಿ 26 ಸಚಿವರೂ ಪ್ರಮಾಣ ಸ್ವೀಕಾರ ಮಾಡಿದರು.

ಭೂಪೇಂದ್ರ ಪಟೇಲ್‌ (Bhupendra Patel) ಸಂಪುಟದ 16 ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಗಾಂಧಿನಗರದ ಮಹಾತ್ಮ ಮಂದಿರ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ 26 ಸದಸ್ಯರು ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಜಾತಿ ಮತ್ತು ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಕೆಲವರಿಗೆ, ವಿಪಕ್ಷಗಳಿಂದ ಬಿಜೆಪಿ ಸೇರ್ಪಡೆಯಾದ ಕೆಲ ನಾಯಕರನ್ನ ಗುರುತಿಸಿ ಸಚಿವ ಸ್ಥಾನ ನೀಡಿರುವುದು ಹಿರಿಯ ನಾಯಕರ ಮೆಚ್ಚುಗೆಗೂ ಪಾತ್ರವಾಗಿದೆ.

2027ರ ವಿಧಾನಸಭಾ ಚುನಾವಣೆಯನ್ನ ಗುರಿಯಾಗಿಟ್ಟು ಸಮುದಾಯದ ನಾಯಕರು, ಕಾರ್ಯಕರ್ತರ ಮೇಲೆ ಹಿಡಿತ ಸಾಧಿಸುವ ನಾಯಕರನ್ನ ಸಂಪುಟಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಪಾಟಿದಾರ್ ಸಮುದಾಯದ ಆರು ಮಂದಿ, ಪರಿಶಿಷ್ಟ ಜಾತಿಯಿಂದ ಮೂವರು, ಆದಿವಾಸಿ ಸಮುದಾಯದ ನಾಲ್ವರು, ಕ್ಷತ್ರಿಯ ಸಮುದಾಯದ ಇಬ್ಬರು, ಒಬಿಸಿ ಸಮುದಾಯದ ಎಂಟು ಮಂದಿ ಹಾಗೂ ಬ್ರಾಹ್ಮಣ ಮತ್ತು ಜೈನ ಸಮುದಾಯ ತಲಾ ಒಬ್ಬೊಬ್ಬರಿಗೆ ಸಚಿವ ಸ್ಥಾನ ನೀಡಲಾಯಿತು.

ಸಮುದಾಯವಾರು ನಾಯಕರ ಪಟ್ಟಿ
* ಪಾಟಿದಾರ್ ಸಮುದಾಯದಿಂದ: ಕೌಶಿಕ್ ವೆಕಾರಿಯಾ, ಪ್ರಫುಲ್ ಪನ್ಸಾರಿಯಾ, ಕಾಂತಿ ಅಮೃತಿಯಾ, ರಿಷಿಕೇಶ್ ಪಟೇಲ್, ಜಿತುಭಾಯ್ ವಘಾನಿ ಮತ್ತು ಕಮಲೇಶ್ ಪಟೇಲ್.
* ಪರಿಶಿಷ್ಟ ಜಾತಿಯಿಂದ: ಮನೀಶಾ ವಕೀಲ್, ಪ್ರದ್ಯುಮ್ನ ವಾಜಾ ಮತ್ತು ದರ್ಶನ್ ವಘೇಲಾ.
* ಆದಿವಾಸಿ ಸಮುದಾಯದಿಂದ: ರಮೇಶ ಕಾಟಾರ, ಪಿ.ಸಿ. ಬರಂದ, ಜೈರಾಮ್ ಗಮಿತ್ ಮತ್ತು ನರೇಶ್ ಪಟೇಲ್.
* ಕ್ಷತ್ರಿಯ ಸಮುದಾಯದಿಂದ: ರಿವಾಬಾ ಜಡೇಜಾ ಮತ್ತು ಸಂಜಯ್‌ಸಿನ್ಹ್ ಮಹಿದಾ.
* ಒಬಿಸಿ ಸಮುದಾಯದಿಂದ: ಕುನ್ವರ್ಜಿ ಬವಲಿಯಾ, ಅರ್ಜುನ್ ಮೊದ್ವಾಡಿಯಾ, ಪರ್ಷೋತ್ತಮ್ ಸೋಲಂಕಿ, ತ್ರಿಕಮ್ ಛಂಗಾ, ಪ್ರವೀಣ್ ಮಾಲಿ, ಸ್ವರೂಪ್ಜಿ ಠಾಕೋರ್, ಈಶ್ವರಸಿನ್ಹ್ ಪಟೇಲ್ ಮತ್ತು ರಾಮನ್ ಸೋಲಂಕಿ.
* ಬ್ರಾಹ್ಮಣ ಸಮುದಾಯದಿಂದ: ಕನುಭಾಯಿ ದೇಸಾಯಿ
* ಜೈನ (ಲಘುಮತಿ) ಸಮುದಾಯದಿಂದ: ಹರ್ಷ ಸಾಂಘ್ವಿ

Share This Article