ನಮ್ಮೊಂದಿಗೆ ರಾಜ ಹುಲಿ ಇದ್ದಾರೆ : ಹರತಾಳು ಹಾಲಪ್ಪ

Public TV
1 Min Read

-ವಿರೋಧ ಪಕ್ಷದ ಆರೋಪಗಳಿಗೆ ಬಿಜೆಪಿ ತಲೆಕೆಡಿಸಿ ಕೊಳ್ಳುವುದಿಲ್ಲ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಖುದ್ದಾಗಿ ವಿಧಾನ ಪರಿಷತ್ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿರುವುದು ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ರಾಜಕೀಯ ಅಂದ ಮೇಲೆ ಆರೋಪ ಪ್ರತ್ಯಾರೋಪಗಳು ಸಹಜ. ಆದರೆ ವಿರೋಧ ಪಕ್ಷಗಳ ಆರೋಪಗಳ ಬಗ್ಗೆ ನಾವು ತಲೆಕೆಡಿಸಿ ಕೊಳ್ಳುವುದಿಲ್ಲ. ಯಾಕಂದರೆ ನಮ್ಮೊಂದಿಗೆ ರಾಜ ಹುಲಿ ಇದ್ದಾರೆ ಎಂದು ಹೇಳಿ ಮತದಾರರಿಗೆ ಶಾಸಕ ಹರತಾಳು ಹಾಲಪ್ಪ ಧೈರ್ಯ ತುಂಬಿದರು.

ಜಿಲ್ಲೆಯ ಸಾಗರದ ಗಾಂಧಿ ಮೈದಾನದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಜಿಲ್ಲೆಯ ಅಭಿವೃದ್ಧಿಗೆ ಕೈಗೊಂಡ ಹಲವು ಯೋಜನೆಗಳು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿವೆ ಎಂದರು.

ತಾಲೂಕಿನ ಅಂಬಾರಗೋಡ್ಲು – ಕಳಸವಳ್ಳಿ ನಡುವೆ ಸೇತುವೆ ನಿರ್ಮಾಣ ಕಾಮಗಾರಿ ಅಸಾಧ್ಯ ಎನ್ನುವ ಭಾವನೆ ಇತ್ತು. ಅದನ್ನು ಸಾಧ್ಯ ಮಾಡಿದ ಶ್ರೇಯಸ್ಸು ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಆನಂದಪುರ ಹೋಬಳಿಗೆ ಕುಡಿಯುವ ನೀರು ಕಲ್ಪಿಸುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿ ಚಾಲ್ತಿಯಲ್ಲಿದೆ. ಆವಿನಹಳ್ಳಿ ಹೋಬಳಿಗೂ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕಟೀಲ್ ಅಸಂಬದ್ಧ ಹೇಳಿಕೆ ನೀಡ್ತಾನೆ: ಏಕವಚನದಲ್ಲಿ ಸತೀಶ್ ಜಾರಕಿಹೊಳಿ ವಾಗ್ದಾಳಿ

ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 415 ಮತಗಳಿದ್ದು, ಈ ಪೈಕಿ 269 ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. ಇದಲ್ಲದೇ ಇತರ ಪಕ್ಷಗಳ ಬೆಂಬಲ ಹೊಂದಿರುವ ಮತದಾರರ ವಿಶ್ವಾಸವನ್ನು ಪಡೆಯುವ ನಿಟ್ಟಿನಲ್ಲಿ ಅವರ ಮನವೊಲಿಸಲಾಗುತ್ತಿದೆ. ನಮ್ಮ ಅಭ್ಯರ್ಥಿ ಡಿ.ಎಸ್. ಅರುಣ್ ಅರವನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ:  ಅಪ್ಪು ಚಿತ್ರದ ದೃಶ್ಯಗಳನ್ನ ವೇದಿಕೆಯಲ್ಲಿ ಮರುಸೃಷ್ಟಿದ ಕಿರುತರೆ ಕಲಾವಿದರ ತಂಡ

Share This Article
Leave a Comment

Leave a Reply

Your email address will not be published. Required fields are marked *