ಹರ್ಯಾಣದಲ್ಲಿ ಹಾವು ಏಣಿ ಆಟ ಆರಂಭ – ಬಿಜೆಪಿಗೆ ಅಲ್ಪ ಮುನ್ನಡೆ

Public TV
1 Min Read

ನವದೆಹಲಿ: ಹರ್ಯಾಣದಲ್ಲಿ (Haryana Election Results) ಹಾವು ಏಣಿ ಆಟ ಆರಂಭವಾಗಿದೆ. ಆರಂಭದಲ್ಲಿ ಕಾಂಗ್ರೆಸ್‌ (Congress) ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ (BJP) ಮುನ್ನಡೆ ಸಾಧಿಸಿದೆ.

ಬೆಳಗ್ಗಿನ 9 ಗಂಟೆಯ ಟ್ರೆಂಡ್‌ ವೇಳೆ ಕಾಂಗ್ರೆಸ್‌ ಮುನ್ನಡೆಯಲ್ಲಿತ್ತು. ಆದರೆ ಬೆಳಗ್ಗೆ 10 ಗಂಟೆಯ ಟ್ರೆಂಡ್‌ ವೇಳೆ ಬಿಜೆಪಿ ಮುನ್ನಡೆ ಸಾಧಿಸಿದೆ. ಸದ್ಯ ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್‌ 41 ಇತರರು 03 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಹರ್ಯಾಣದಲ್ಲಿ ಒಟ್ಟು 90 ಕ್ಷೇತ್ರಗಳಿದ್ದು ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಬಿಜೆಪಿ 2014 ರಿಂದ ಅಧಿಕಾರದಲ್ಲಿತ್ತು. 2014ರ ಚುನಾವಣೆಯಲ್ಲಿ ಬಿಜೆಪಿ 47 ರಲ್ಲಿ ಜಯಗಳಿಸಿದರೆ ಕಾಂಗ್ರೆಸ್‌ 15 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.

2019 ರ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್‌ 31, ದುಶ್ಯಂತ್‌ ಚೌಟಾಲ ವಾರ ಜೆಜಪಿ 10 ಸ್ಥಾನವನ್ನು ಗೆದ್ದುಕೊಂಡಿತ್ತು. ನಂತರ ಬಿಜೆಪಿ ಮತ್ತು ಜೆಜೆಪಿ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಏರಿತ್ತು.

ಲೋಕಸಭಾ ಚುನಾವಣೆಯಲ್ಲಿ INDIA ಒಕ್ಕೂಟ ಉತ್ತಮ ಪ್ರದರ್ಶನ ನೀಡಿದ್ದರಿಂದ ಈ ಬಾರಿ ಹರ್ಯಾಣದಲ್ಲಿ ಬಿಜೆಪಿಗೆ ಹಿನ್ನಡೆ ಆಗಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿದ್ದವು.

Share This Article