ಮನೆಯಲ್ಲಿ ಗುಂಡು ಹಾರಿಸಿಕೊಂಡು ಎಡಿಜಿಪಿ ಆತ್ಮಹತ್ಯೆ – ಜಪಾನ್‌ ಪ್ರವಾಸದಲ್ಲಿರೋ ಪತ್ನಿ ಐಎಎಸ್‌ ಅಧಿಕಾರಿ

Public TV
1 Min Read

ಚಂಡೀಗಢ: ಹಿರಿಯ ಐಪಿಎಸ್ ಅಧಿಕಾರಿ ವೈ. ಪೂರ್ಣ್ ಕುಮಾರ್ (Y. Poorn Kumar) ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂಡೀಗಢದ ಸೆಕ್ಟರ್ -11 ರಲ್ಲಿರುವ ತಮ್ಮ ಸರ್ಕಾರಿ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಂಡೀಗಢ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕುಮಾರ್‌ ಅವರು ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಬಿಹಾರ ವಿಧಾನಸಭೆ ಚುನಾವಣೆ; ಎನ್‌ಡಿಎ-ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ

ವೈ. ಪೂರ್ಣ್ ಕುಮಾರ್ ಎಡಿಜಿಪಿ ಶ್ರೇಣಿಯ ಅಧಿಕಾರಿಯಾಗಿದ್ದರು. ಅವರನ್ನು ಸೆ.29 ರಂದು ರೋಹ್ಟಕ್‌ನ ಸುನಾರಿಯಾ ಜೈಲಿಗೆ ವರ್ಗಾಯಿಸಲಾಗಿತ್ತು. ಸಾಧ್ವಿಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ರಾಮ್ ರಹೀಮ್ ಶಿಕ್ಷೆ ಅನುಭವಿಸುತ್ತಿರುವುದು ಇದೇ ಜೈಲಿನಲ್ಲಿ.

ವೈ. ಪೂರ್ಣ್ ಕುಮಾರ್ ಅವರ ಪತ್ನಿ ಅಮನ್ ಪಿ. ಕುಮಾರ್ ಕೂಡ ಐಪಿಎಸ್ ಅಧಿಕಾರಿ. ಅ.5 ರಂದು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಇತರ ಅಧಿಕಾರಿಗಳೊಂದಿಗೆ ಜಪಾನ್ ಪ್ರವಾಸಕ್ಕೆ ಹೋಗಿದ್ದರು. ಅವರು ನಾಳೆ ಸಂಜೆ ಭಾರತಕ್ಕೆ ಮರಳಲಿದ್ದಾರೆ. ಇದನ್ನೂ ಓದಿ: ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳ ಸಾವು ಪ್ರಕರಣ – ಸುಪ್ರೀಂಕೋರ್ಟ್‌ಗೆ ಪಿಐಎಲ್

ಕಳೆದ ವರ್ಷ ವೈ. ಪೂರ್ಣ್ ಕುಮಾರ್ ಅವರು ಕೆಲವು ಐಪಿಎಸ್ ಅಧಿಕಾರಿಗಳ ಬಡ್ತಿ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಈ ಅಧಿಕಾರಿಗಳು 1991, 1996, 1997 ಮತ್ತು 2005 ರ ಬ್ಯಾಚ್‌ಗಳಿಗೆ ಸೇರಿದವರಾಗಿದ್ದರು. ಈ ಬಡ್ತಿಗಳನ್ನು ಅನುಚಿತವಾಗಿ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿಗೆ ಪತ್ರ ಬರೆದಿದ್ದರು. ಹಣಕಾಸು ಇಲಾಖೆಯು ಗೃಹ ಸಚಿವಾಲಯದ ನಿಯಮಗಳನ್ನು ನಿರ್ಲಕ್ಷಿಸಿ ಬಡ್ತಿಗಳನ್ನು ಸ್ವಂತವಾಗಿ ಅನುಮೋದಿಸಿದೆ ಎಂದು ಆಪಾದಿಸಿದ್ದರು.

Share This Article