Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

Public TV
2 Min Read

ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ (Haryana Elections) ಬಿಜೆಪಿಯು 21 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಬಿಜೆಪಿ ಈವರೆಗೆ 87 ಅಭ್ಯರ್ಥಿಗಳನ್ನು (BJP Candidates) ಘೋಷಣೆ ಮಾಡಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್‌ ಸೇರ್ಪಡೆಯಾದ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ವಿರುದ್ಧ ಜುಲಾನಾ ಕ್ಷೇತ್ರದಿಂದ ಕ್ಯಾಪ್ಟನ್‌ ಯೋಗೇಶ್‌ ಬೈರಾಗಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಇದನ್ನೂ ಓದಿ: Hit-and-Run Case | ಬಾರ್‌ನಿಂದ ಬಂದು ಹಲವು ಕಾರುಗಳಿಗೆ ಡಿಕ್ಕಿ – ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷನ ಪುತ್ರ ಪರಾರಿ

67 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ, ಪಕ್ಷವು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರನ್ನು ಕರ್ನಾಲ್‌ನಿಂದ ಲಾಡ್ವಾ ಸ್ಥಾನಕ್ಕೆ ಕಣಕ್ಕಿಳಿಸಿದೆ. ಸೈನಿ ಅವರು 2019ರಿಂದ 2024ರ ಅವಧಿಯಲ್ಲಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಓಂ ಪ್ರಕಾಶ್ ಧನಕರ್ ಅವರನ್ನು ಬದ್ಲಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಜೊತೆಗೆ ಮಾಜಿ ರಾಜ್ಯ ಸಚಿವ ಅನಿಲ್ ವಿಜ್ ಅವರು ತಮ್ಮ ಸಾಂಪ್ರದಾಯಿಕ ಭದ್ರಕೋಟೆಯಾದ ಅಂಬಾಲಾ ಕ್ಯಾಂಟ್‌ನಿಂದ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ವಯನಾಡು ದುರಂತದ ಬಳಿಕ ಸರ್ಕಾರ ಅಲರ್ಟ್- ಕಾಫಿನಾಡಲ್ಲಿ 40 ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ನೋಟಿಸ್

ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್‌ ನೀಡಿದೆ. ಈ ಹಿಂದೆ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ)ಯಲ್ಲಿದ್ದ ದೇವೆಂದರ್ ಸಿಂಗ್ ಸದ್ಯ ಬಿಜೆಪಿಯಿಂದ ಬಬ್ಲಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹರಿಯಾಣದ ಮಾಜಿ ಸಿಎಂ ಬನ್ಸಿ ಲಾಲ್ ಅವರ ಮೊಮ್ಮಗಳು ಶ್ರುತಿ ಚೌಧರಿ ತೋಷಮ್‌ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸತತ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್‌

ಮುಂದಿನ ಅಕ್ಟೋಬರ್ 5 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ರದ್ದು ಮಾಡಿ- ಸಿಎಂಗೆ ಕುರುಬೂರು ಶಾಂತಕುಮಾರ್ ಮನವಿ 

Share This Article