– ಇತಿಹಾಸದಲ್ಲೇ ಮೊದಲ ಬಾರಿ ಅಧಿಕ ಭಕ್ತರ ಭೇಟಿ
– ದೇಗುಲಕ್ಕೆ 17 ಕೋಟಿ ಆದಾಯ
ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅ.10ರಿಂದ ಸೋಮವಾರದವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ ಬರೆದಿದೆ.
ಅ.10ರಿಂದ ಹಾಸನಾಂಬೆ ದೇವಿ ದರ್ಶನ ಪ್ರಾರಂಭವಾದಾಗಿನಿಂದ ಸೋಮವಾರ (ಅ.20)ರವೆರೆಗೂ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ – ಕ್ರಮವಹಿಸದೇ ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ
ಈವರೆಗೂ ಹಾಸನಾಂಬೆ ದೇವಸ್ಥಾನಕ್ಕೆ 1,000, 300ರೂ. ಟಿಕೆಟ್ ಹಾಗೂ ಲಾಡು ಪ್ರಸಾದದಿಂದ ದೇಗುಲಕ್ಕೆ ಒಟ್ಟು 17 ಕೋಟಿ ರೂ. ಆದಾಯ ಹರಿದುಬಂದಿದ್ದು, ನಾಳೆ (ಅ.22) ಸಂಜೆ 7ಕ್ಕೆ ಸಾರ್ವಜನಿಕ ದರ್ಶನಕ್ಕೆ ಅದ್ಧೂರಿ ತೆರೆ ಬೀಳಲಿದೆ.
ಇಂದು ಬೆಳಗ್ಗೆ 7:30ರ ತನಕ ಸಾಲುಗಳು ಖಾಲಿಯಿದ್ದವು, ಆದರೆ 7.30ರ ಬಳಿಕ ಭಕ್ತರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿ ಧರ್ಮ ದರ್ಶನದ ಸಾಲು, 1000, 300 ರೂ. ವಿಶೇಷ ದರ್ಶನದ ಸಾಲಿನಲ್ಲೂ ಜನಜಂಗುಳಿ ಉಂಟಾಗಿದೆ. ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸಾಗೋರಾಪಾದಿಯಲ್ಲಿ ಭಕ್ತರು ಹರಿದುಬರುತ್ತಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದರ್ಶನ ಪಡೆದ ಶಿವರಾಜ್‌ಕುಮಾರ್, ರಿಷಬ್ ಶೆಟ್ಟಿ ದಂಪತಿ
