ಹಾಸನಾಂಬೆ ಸಾರ್ವಜನಿಕ ದರ್ಶನೋತ್ಸವ ಇಂದಿನಿಂದ ಆರಂಭ

By
1 Min Read

– ಬೆಳ್ಳಂಬೆಳಗ್ಗೆಯೇ ಹೆಚ್.ಡಿ ರೇವಣ್ಣ ಭೇಟಿ

ಹಾಸನ: ಹಾಸನಾಂಬೆ (Hasanamba) ಸಾರ್ವಜನಿಕ ದರ್ಶನೋತ್ಸವ ಇಂದಿನಿಂದ ಆರಂಭವ ಆಗಿದೆ. ಮೊದಲ ದಿನವೇ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಇಂದಿನಿಂದ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನಿಡಲಾಗಿದೆ. ಇಂದು (ಶುಕ್ರವಾರ) ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ದರ್ಶನಕ್ಕೆ ಅವಕಾಶ ಇದೆ.

ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಇಂದು ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ಕಾಯುತ್ತಿದ್ದಾರೆ. ಈ ಮೂಲಕ ವರ್ಷದ ಬಳಿಕ ಶಕ್ತಿ ದೇವತೆ ಹಾಸನಾಂಬೆಯ ದರ್ಶನವನ್ನು ಪಡೆಯುತ್ತಿದ್ದಾರೆ. ಇದನ್ನೂ ಓದಿ: ಭಾರತೀಯ ಮೂಲದ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣದಿಂದ ವಿಚಲಿತರಾಗಿದ್ದೇವೆ: ಯುಎಸ್

ಹೆಚ್‌ಡಿ ರೇವಣ್ಣ ಭೇಟಿ: ಹಾಸನಾಂಬೆ ದೇವಿಯ ದರ್ಶನ ಹಿನ್ನೆಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಬೆಳ್ಳಂಬೆಳಗ್ಗೆ ದೇಗುಲಕ್ಕೆ ಭೇಟಿ ಮಾಡಿ ದರ್ಶನ ಪಡೆದಿದ್ದಾರೆ. ಇಂದು ಶುಕ್ರವಾರ ಹಿನ್ನೆಲೆಯಲ್ಲಿ ಮೊದಲ ಪೂಜೆಗೆ ರೇವಣ್ಣ ಆಗಮಿಸಿದ್ದಾರೆ. ತಮ್ಮ ಆಪ್ತರ ಜೊತೆ ಹಾಸನಾಂಬೆ ದರ್ಶನಕ್ಕೆ ಬಂದಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್