ಅ.9ರಂದು ಹಾಸನಾಂಬ ದೇಗುಲ ಓಪನ್ – ಭಕ್ತರ ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ

Public TV
3 Min Read

– ದೇವಿ ದರ್ಶನದ ಜೊತೆಗೆ ಟೂರ್ ಪ್ಯಾಕೇಜ್

ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ (Devotees) ದರ್ಶನ ಭಾಗ್ಯ ಕಲ್ಪಿಸುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ (Hasanamba Fair) ದಿನಗಣನೆ ಆರಂಭವಾಗಿದೆ. ಹಿಂದಿಗಿಂತ ಈ ಬಾರಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ. ಈ ಬಾರಿ ದೇವಿ ದರ್ಶನದ ಜೊತೆಗೆ ಟೂರ್ ಪ್ಯಾಕೇಜ್, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲು ಯೋಜನೆ ಹಮ್ಮಿಕೊಳ್ಳಲಾಗಿದೆ. ಅ.9 ರಂದು ಹಾಸನಾಂಬ ದೇಗುಲದ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಸಾರ್ವಜನಿಕರ ದರ್ಶನಕ್ಕೂ ಅವಕಾಶ ಮಾಡಿಕೊಡಲಾಗಿದೆ.

ಹಾಸನಾಂಬ ಮತ್ತು ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಈಗಾಗಲೇ ಜಿಲ್ಲಾ ಉಸ್ತುವಾರಿ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಪೂರ್ವ ತಯಾರಿಯೊಂದಿಗೆ ಭರದಿಂದ ಸಿದ್ಧತೆ ಸಾಗಿದೆ. ಈಗಾಗಲೇ ದೇವಸ್ಥಾನಕ್ಕೆ ಬಣ್ಣ ಬಳಿಯುವ ಕಾರ್ಯ ಪೂರ್ಣಗೊಂಡು, ಆಹ್ವಾನ ಪತ್ರಿಕೆಗಳ ಹಂಚಿಕೆ ಕಾರ್ಯವೂ ನಡೆಯುತ್ತಿದೆ. ಹಾಸನ ನಗರದ ಹಲವೆಡೆ ಸ್ವಾಗತ ಕಮಾನು, ಇಡೀ ನಗರದಾದ್ಯಂತ ಲೈಟಿಂಗ್, ಎಲ್‌ಇಡಿ ಅಳವಡಿಕೆ, ರಸ್ತೆ ಗುಂಡಿ ಮುಚ್ಚುವ ಕಾರ್ಯ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಬ್ಯಾರಿಕೇಡ್, ಮ್ಯಾಟ್ ಸೇರಿದಂತೆ ಬರುವ ಭಕ್ತರಿಗೆ ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ. ಇದನ್ನೂ ಓದಿ: ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ

ಕಳೆದ ಬಾರಿ 20 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ಬಾರಿ ಇನ್ನೂ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ನೂಕುನುಗ್ಗಲು ಆಗದಂತೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಅಗತ್ಯ ಕ್ರಮಕ್ಕೆ ಮುಂದಾಗಿದೆ. ವಿಶೇಷ ದರ್ಶನಕ್ಕೆ ಬರುವಂತಹ ಭಕ್ತರಿಗೆ 300 ರೂ. ಹಾಗೂ 1000 ರೂ. ಪಾಸ್ ವ್ಯವಸ್ಥೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದು ಮಾಡಿದ್ದು ಗೋಲ್ಡ್ ಪಾಸ್ ಜಾರಿಗೆ ತರಲಾಗಿದೆ. ಒಂದು ಪಾಸ್‌ಗೆ ಒಬ್ಬರಿಗೆ ಮಾತ್ರ ಅವಕಾಶವಿದ್ದು, ದಿನದಲ್ಲಿ ಎರಡು ಗಂಟೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದರ್ಶನಕ್ಕೆ ಬರುವ ವೃದ್ಧರು ಮತ್ತು ಅಂಗವಿಕಲರನ್ನು ದೇವರ ದರ್ಶನಕ್ಕೆ ಕರೆದುಕೊಂಡು ಹೋಗಲು ವ್ಯವಸ್ಥೆ ಕಲ್ಪಿಸಲಾಗಿದೆ. ಸುಗಮ ದರ್ಶನಕ್ಕಾಗಿ ಜನದಟ್ಟಣೆ ಉಂಟಾಗುವುದನ್ನು ತಪ್ಪಿಸಲು (ದೇವಾಲಯದಿಂದ 30 ಕಿ.ಮೀ.) ಬ್ಯಾರಿಕೇಡ್ ವ್ಯವಸ್ಥೆ, ಜರ್ಮನ್ ಟೆಂಟ್, ನೆಲಕ್ಕೆ ಮ್ಯಾಟ್, 100ಕ್ಕೂ ಹೆಚ್ಚು ಶೌಚಾಲಯಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ. ಬೆಂಗಳೂರು ಹಾಗೂ ಮೈಸೂರಿನಿಂದ ಬರುವ ಭಕ್ತರಿಗೆ ದೇವಿ ದರ್ಶನದ ಜೊತೆಗೆ ಟೂರಿಸಂ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ

ಸರದಿ ಸಾಲಿನಲ್ಲಿ ಬರುವ ಭಕ್ತರಿಗೆ ತೊಂದರೆಯಾಗದಂತೆ ಫ್ಯಾನ್, ಗರ್ಭಗುಡಿ ಮುಂಭಾಗ ಎಸಿ, ಭಕ್ತರಿಗೆ ಕುಡಿಯಲು ನೀರು ಮತ್ತು ಮಜ್ಜಿಗೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ದೇವಾಲಯದ ಒಳಗೆ ಮತ್ತು ಹೊರಗೆ ಆಕರ್ಷಣಿಯವಾಗಿ ಮತ್ತು ವಿಭಿನ್ನವಾಗಿ ಹೂವಿನ ಅಲಂಕಾರ ಮಾಡಲಾಗುತ್ತದೆ. ಅ.9 ಅಂದರೆ ಅಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12 ಗಂಟೆ ನಂತರ ಅರಸು ವಂಶಸ್ಥರು ಬನ್ನಿ ಕಡಿದ ಬಳಿಕ ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದೆ. ಮೊದಲ ದಿನ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬಾಗಿಲು ತೆರೆದ ನಂತರ ಗರ್ಭಗುಡಿ ಸ್ವಚ್ಛತಾ ಮಾಡಲಾಗುವುದು. ಮಾರನೇ ಬೆಳಿಗ್ಗೆ 5 ಗಂಟೆಯಿಂದ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಧಾರವಾಡದಲ್ಲೊಂದು ಅಚ್ಚರಿ ಪಕ್ರರಣ – ನವಜಾತ ಗಂಡು ಶಿಶುವಿನೊಳಗೆ ಮತ್ತೊಂದು ಶಿಶು ಪತ್ತೆ

ಹಾಸನಾಂಬ ದೇವಿ ದರ್ಶನಕ್ಕೆ ಪ್ರತಿ ವರ್ಷ ಲಕ್ಷಾಂತರ ಜನ ಆಗಮಿಸುತ್ತಿದ್ದು, ಈ ಬಾರಿ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು ಹೆಚ್ಚಿನ ಅವಧಿ ದೇವಿ ದರ್ಶನದ ಜೊತೆಗೆ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನೂರಕ್ಕು ಹೆಚ್ಚು ಸಿಸಿಟಿವಿಗಳನ್ನು ಅಳವಡಿಸಲಾಗುತ್ತಿದೆ. ಅಲ್ಲದೇ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಲ್ಲುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗುತ್ತಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವು

Share This Article