ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬೆ ಗರ್ಭಗುಡಿ ಬಾಗಿಲು – ಉರಿಯುತ್ತಿದ್ದ ದೀಪ, ಬಾಡದ ಹೂವು, ಹಳಸದ ನೈವೇದ್ಯ

Public TV
1 Min Read

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ (Hasanamba Temple) ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಮಧ್ಯಾಹ್ನ 12:21ಕ್ಕೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ಕಳೆದ ವರ್ಷ ಗರ್ಭಗುಡಿ ಬಾಗಿಲು ಮುಚ್ಚುವ ವೇಳೆ ಹಚ್ಚಿದ್ದ ದೀಪ ಉರಿಯುತ್ತಿತ್ತು. ದೇವರ ಮುಂದೆ ಇಟ್ಟಿದ್ದ ನೈವೇದ್ಯ ಹಳಸಿರಲಿಲ್ಲ ಮತ್ತು ಹೂವು ಬಾಡಿರಲಿಲ್ಲ.

ಅರಸು ವಂಶಸ್ಥ ನಂಜರಾಜೇಅರಸ್ ಗೊನೆಯುಳ್ಳ ಬಾಳೆಗೊನೆ ಕಡಿದ ಬಳಿಕ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಹಾಸನ ಮಠದ ಪೀಠಾಧ್ಯಕ್ಷ ಶ್ರೀ ಶಂಭುನಾಥ ಸ್ಬಾಮೀಜಿ, ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್

ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಅಕ್ಟೊಬರ್ 23 ರವರೆಗೆ ನಡೆಯಲಿದೆ. ಕೊನೆಯ ದಿನ ಹೊರತುಪಡಿಸಿ 13 ದಿನಗಳ ಕಾಲ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿರುತ್ತದೆ. ಇದನ್ನೂ ಓದಿ: ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ – ದೈವಾರಾಧನೆ ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು

ಕಳೆದ ವರ್ಷ ಅಕ್ಟೋಬರ್ 24 ರಿಂದ ನವೆಂಬರ್ 3ರವರೆಗೆ ಹಾಸನಾಂಬೆ ಜಾತ್ರೋತ್ಸವ ನಡೆದಿತ್ತು. ಈ ವೇಳೆ 20 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದರು. ಈ ಬಾರಿ 25 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಜಾತ್ರೋತ್ಸವದಲ್ಲಿ ಹೆಲಿ ಟೂರಿಸಂ, ಟೂರ್ ಪ್ಯಾಕೇಜ್, ಶ್ವಾನ ಪ್ರದರ್ಶನ, ಪಾಕ ಸ್ಪರ್ಧೆ, ಜಾನಪದ ಉತ್ಸವ ಸೇರಿದಂತೆ ಹಲವು ಆಕರ್ಷಣೆಯಿರಲಿದೆ. ಇದನ್ನೂ ಓದಿ: ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!

Share This Article