– ಜೆಡಿಎಸ್ನಿಂದ 1 ಲಕ್ಷ ರೂ. ಪರಿಹಾರ ಘೋಷಣೆ; ವಿದ್ಯಾಭ್ಯಾಸ ಖರ್ಚು ಭರಿಸುವ ಭರವಸೆ
ಹಾಸನ: ಇಲ್ಲಿನ ಮೊಸಳೆಹೊಸಳ್ಳಿಯಲ್ಲಿ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ ದುರಂತ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಈ ಮೂಲಕ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇತ್ತ ಟ್ರಕ್ ಡೈವರ್ಗೆ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಮುಂದುವರೆದ್ದು, ಆತನ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಈ ನಡುವೆ ನಿನ್ನೆ ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದ ಹೆಚ್.ಡಿ ದೇವೇಗೌಡ (HD Devegowda) ಅವರು ಇಂದು ಮೃತರ ಕುಟುಂಬಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ಜೊತೆಗೆ ಜೆಡಿಎಸ್ ಪಕ್ಷದಿಂದ ಪರಿಹಾರ ಮೊತ್ತವನ್ನೂ ಘೋಷಣೆ ಮಾಡಿದ್ದಾರೆ. ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ಪರಿಹಾರದ ಮೊತ್ತ ಹೆಚ್ಚಿಸುವಂತೆ ಸರ್ಕಾರಕ್ಕೆ ಆಗ್ರಹ ಕೂಡ ಮಾಡಿದ್ದಾರೆ. ಇದನ್ನೂ ಓದಿ: Hassan Tragedy | ಟ್ರಕ್ ಅಪಘಾತ ನಡೆದ ಜಾಗದಲ್ಲಿ ಹಂಪ್ಸ್ ನಿರ್ಮಿಸಲು ತೀರ್ಮಾನ
ವ್ಹೀಲ್ ಚೇರ್ನಲ್ಲೇ ಸ್ಥಳಕ್ಕೆ ಭೇಟಿ
ಶನಿವಾರ ಸಂಜೆ ಹಾಸನಕ್ಕೆ (Hassan) ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು. ವ್ಹೀಲ್ಚೇರಲ್ಲೇ ತೆರಳಿ ಹಿಮ್ಸ್ಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾತನಾಡಿದ ಹೆಚ್.ಡಿ ದೇವೇಗೌಡರು, ಜೆಡಿಎಸ್ ಪಕ್ಷದ ವತಿಯಿಂದ ಮೃತ ಕುಟುಂಬಸ್ಥರಿಗೆ 1 ಲಕ್ಷ ಪರಿಹಾರ ಘೋಷಣೆ ಮಾಡಿದರು. ಪೊಲೀಸರು ಮುಂಜಾಗ್ರತೆ ವಹಿಸಿದ್ದರೇ ಈ ಅನಾಹುತ ತಡೆಯಬಹುದಿತ್ತು ಎಂದರಲ್ಲದೇ ರಾಜ್ಯ ಸರ್ಕಾರ ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೇ ಇಂದು ಮೊಸಳೆಹೊಸಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡದ ಕಾಮಗಾರಿ ವೀಕ್ಷಿಸಿದ ಹೆಚ್ಡಿಡಿ ಬಳಿಕ ಟ್ರಕ್ ಹರಿದು ಮೃತಪಟ್ಟ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರಾದ ಹೆಚ್.ಡಿ ರೇವಣ್ಣ, ಹೆಚ್.ಪಿ ಸ್ವರೂಪ್ಪ್ರಕಾಶ್ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಹಾಸನ ಟ್ರಕ್ ದುರಂತಕ್ಕೆ 10 ಬಲಿ – ಗಾಯಾಳುಗಳ ಆರೋಗ್ಯ ವಿಚಾರಿಸಲು ವ್ಹೀಲ್ಚೇರ್ನಲ್ಲೇ ಆಸ್ಪತ್ರೆಗೆ ಬಂದ ಹೆಚ್ಡಿಡಿ
ವಿದ್ಯಾಭ್ಯಾಸ ಖರ್ಚು ಭರಿಸುವುದಾಗಿ ಭರವಸೆ
ಹೊಳೆನರಸೀಪುರದ ಬಂಟರಹಳ್ಳಿಯ ಪ್ರಭಾಕರ್, ಮುತ್ತಿಗೆಹಿರೀಹಳ್ಳಿಯ ಗೋಕಲ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ದೇವೇಗೌಡರು ಮೃತ ಗೋಕಲ್ ತಂಗಿಯ ವಿದ್ಯಾಭ್ಯಾಸ ಖರ್ಚನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ. ಸದ್ಯ ಗೋಕುಲ್ ತಂಗಿ ನಾಲ್ಕನೇ ತರಗತಿ ಓದುತ್ತಿದ್ದಾಳೆ. ಇದನ್ನೂ ಓದಿ: ಮೃತರ ಕುಟುಂಬಸ್ಥರಿಗೆ ನಷ್ಟ ಭರಿಸಲು ಆಗಲ್ಲ, ಸಹಾಯದ ರೀತಿಯಲ್ಲಿ ಸ್ವಲ್ಪ ಪರಿಹಾರ ನೀಡಿದ್ದೇವೆ – ಕೃಷ್ಣಬೈರೇಗೌಡ
ಡಿಜೆಗೆ ಕುಣಿಯಲು ಬಂದು ಮಸಣ ಸೇರಿದ ಯುವಕರು
ಗಣೇಶ್ ಸಂಭ್ರಮ ನೋಡಲು ಬಂದವರು ನೋಡ ನೋಡ್ತಿದ್ದಂತೆ ಹೆಣವಾಗಿದ್ದು, ನಿಜಕ್ಕೂ ಘೋರ ದುರಂತವೇ ಸರಿ. ಟ್ರಕ್ ಹರಿದ ರಭಸಕ್ಕೆ ಸ್ಥಳದಲ್ಲೇ 9 ಜನರು ಸಾವನಪ್ಪಿದ್ದರೇ. ಗಂಭೀರವಾಗಿ ಗಾಯಗೊಂಡಿದ್ದ ಹಾಸನದ ಶಿವಯ್ಯನ ಕೊಪ್ಪಲು ಗ್ರಾಮದ 28 ವರ್ಷದ ಯುವಕನ ಬ್ರೈನ್ ಡೆಡ್ ಆಗಿತ್ತು. ಹಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಂದನ್ ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾನೆ. ಪುತ್ರನ ಸಾವಿನ ಸುದ್ದಿ ತಿಳಿದು ಆಸ್ಪತ್ರೆ ಅವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಆಟೋ ಚಾಲಕನಾಗಿದ್ದ ಚಂದನ್ಗೆ ಇನ್ನೂ ಮದುವೆಯಾಗಿಲ್ಲ.. ಕುಟುಂಬಕ್ಕೆ ಅಧಾರ ಸ್ತಂಭವಾಗಿದ್ದ, ತನ್ನ ಗ್ರಾಮದಿಂದ ಮೊಸಳೆಹೊಸಳ್ಳಿ ಬಾಡಿಗಿಗೆ ಬಂದಿದ್ದ ಚಂದನ ಟೀ ಕುಡಿಯಲು ಆಟೋ ನಿಲ್ಲಿಸಿ. ಕುತೂಹಲಕ್ಕೆ ಮೆರವಣಿಗೆ ನೋಡಲು ನಿಂತವನು ಮಸಣ ಸೇರಿದ್ದಾನೆ.
ಅಪಘಾತದಲ್ಲಿ ಸಾವನಪ್ಪಿದ ಹೊಳೆನರಸೀಪುರ ತಾಲೂಕು ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ ಬಿನ್ ರವಿಕುಮಾರ್ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೇರವೇರಿದೆ. ಎಸ್ಎಸ್ಎಲ್ಸಿಯಲ್ಲಿ 95% ಅಂಕ ಪಡೆದು, ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಈಶ್ವರ. ಮೆರವಣಿಗೆ ನೋಡಲು ಬಂದು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆಟೋ ಓಡಿಸಿಕೊಂಡು ಗ್ರಾಮದಲ್ಲಿ ಜೀವನ ಸಾಗಿಸುತ್ತಿದ್ದ ಈಶ್ವರ ಪೋಷಕರು. ಮಗನನ್ನು ಚನ್ನಾಗಿ ಓದಿಸುವ ಆಕಾಂಕ್ಷೆ ಹೊಂದಿದ್ದರು. ಇದನ್ನೂ ಓದಿ: Hassan Tragedy | ಮೃತರೆಲ್ಲ ಹಳ್ಳಿಯವ್ರು, 10 ಲಕ್ಷ ಪರಿಹಾರ ಕೊಟ್ರೆ ಒಳ್ಳೆಯದು – ಸರ್ಕಾರಕ್ಕೆ ಆರ್.ಅಶೋಕ್ ಮನವಿ