ಹಾಸನ: ಮೊಸಳೆಹೊಸಳ್ಳಿಯಲ್ಲಿ (MosaleHosalli) ಭೀಕರ ಅಪಘಾತ (Accident) ನಡೆದ ರಸ್ತೆಯ 500 ಮೀಟರ್ ಅಂತರದಲ್ಲಿ 6 ಹಂಪ್ಸ್ ನಿರ್ಮಾಣಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.
ಘಟನಾಸ್ಥಳಕ್ಕೆ ಪಿಡಬ್ಲ್ಯೂಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಎಡಿಸಿ ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ಹಂಪ್ಸ್ ನಿರ್ಮಾಣಕ್ಕೆ ಸ್ಥಳ ಗುರುತು ಮಾಡಿದ್ದಾರೆ. ಸುಮಾರು 6 ಹಂಪ್ಸ್‍ಗಳ ನಿರ್ಮಿಸಲು ತಿರ್ಮಾನಿಸಲಾಗಿದೆ. ಇದನ್ನೂ ಓದಿ: ಹಾಸನ ದುರಂತ | ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ? – ಸಿದ್ದರಾಮಯ್ಯ
ಮೊಸಳೆಹೊಸಳ್ಳಿ ಸೊಸೈಟಿ ಸರ್ಕಲ್‍ನಲ್ಲಿ ಎರಡು ಹಂಪ್ಸ್, ಸಮುದಾಯ ಆರೋಗ್ಯ ಕೇಂದ್ರದ ಎದುರು ಎರಡು ಹಂಪ್ಸ್ ಸೇರಿದಂತೆ 6 ಹಂಪ್ಸ್ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸಲಾಗಿದೆ.
ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು 10 ಮಂದಿ ಸಾವಿಗೀಡಾಗಿದ್ದಾರೆ. 22 ಮಂದಿ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟವರಿಗೆ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. ಇದನ್ನೂ ಓದಿ: ಹಾಸನ | ವಿಮಾನ ದುರಂತದಲ್ಲಾದ್ರೆ 1 ಕೋಟಿ ಕೊಡ್ತೀರಿ, ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ ಜನರ ತರಾಟೆ