ರಾಣೇಬೆನ್ನೂರಿನಲ್ಲಿ 18 ಅಂಗಡಿಗಳ ಮೇಲೆ ದಾಳಿ- 2,250 ರೂ. ದಂಡ ವಸೂಲಿ

Public TV
1 Min Read

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ರಾಣೇಬೆನ್ನೂರು ನಗರದ ಆಯ್ದ 18 ಅಂಗಡಿಗಳ ಮೇಲೆ ದಾಳಿ ನಡೆಸಿ ರೂ.2,250 ದಂಡ ವಸೂಲಿ ಮಾಡಿದೆ.

ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅಲ್ಲದೆ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿಯಲ್ಲಿ 14 ಪ್ರಕರಣಗಳಲ್ಲಿ 1850 ರೂ. ಹಾಗೂ ಕಲಂ 6ಬಿ ಅಡಿಯಲ್ಲಿ 4 ಪ್ರಕರಣಳಲ್ಲಿ ರೂ.400 ಸೇರಿ 2,250 ರೂ. ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ್ ವಿ. ದಡ್ಡಿ ಹಾಗೂ ದಾದಾಪೀರ ಹುಲಿಕಟ್ಟಿ, ಮಹೇಶ ಕುಮ್ಮೂರ, ನಾಗರಜ ಕುಡುಪಲಿ, ತಾಲೂಕು ಆರೋಗ್ಯ ಕಚೇರಿ ಸಿಬ್ಬಂದಿ ಹಾಗೂ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಇತತರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *