ಕೇದಾರನಾಥದ ಶಂಕರಾಚಾರ್ಯರ ಪ್ರತಿಮೆ ಕುರಿತು ಮೋದಿಗೆ ಪತ್ರ ಬರೆದ ದೇವೇಗೌಡರು

Public TV
1 Min Read

ಬೆಂಗಳೂರು: ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿರುವುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದು ಸಂತಸ ಹಂಚಿಕೊಂಡಿದ್ದಾರೆ.

ಪತ್ರದಲ್ಲಿ ಏನಿದೆ?
ಕೇದಾರನಾಥದಲ್ಲಿ ನವೆಂಬರ್ 5 ರಂದು ನೀವು ಅನಾವರಣಗೊಳಿಸಿದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಕಂಡು ತುಂಬಾ ಸಂತೋಷವಾಗಿದೆ. ನಿಮಗೆ ಇದಕ್ಕಾಗಿ ಧನ್ಯವಾದ ತಿಳಿಸುತ್ತೇನೆ. ಕರ್ನಾಟಕದ ಚಿಕ್ಕಮಗಳೂರಿನ ಸೃಂಗೇರಿಯ ಶಾರದಾ ಪೀಠದ ಅನುಯಾಯಿ ನಾನು. ನಿಮಗೆ ತಿಳಿದಿರುವಂತೆ ಮಹಾನ್ ಸಂತ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ ನಾಲ್ಕು ಶಕ್ತಿಕೇಂದ್ರಗಳಲ್ಲಿ ಇದೂ ಕೂಡ ಒಂದು. ಶೃಂಗೇರಿ ಮಠವು ಸರ್ವಧರ್ಮ ಸಮನ್ವಯದ ಸಂಕೇತವಾಗಿದೆ. ಇದನ್ನೂ ಓದಿ: ನಾಲ್ವರು ಮಹಿಳಾ ಹೋರಾಟಗಾರ್ತಿಯರ ಹತ್ಯೆಯಾಗಿದೆ ಎಂದ ತಾಲಿಬಾನ್

ಶೃಂಗೇರಿ ಮಠ ನನ್ನನ್ನು ಆಕರ್ಷಿಸಿದ್ದು, ಅವರ ಸಾಮರಸ್ಯದಿಂದ. ಇಲ್ಲಿ ಅನೇಕ ಶತಮಾನಗಳಿಂದ ರಾಜರು, ಆಡಳಿತಗಾರರಿಗೆ ಆಧ್ಯಾತ್ಮಿಕದ ಅರಿವನ್ನು ಮೂಡಿಸಿದ್ದಾರೆ. ಒಡೆಯರು, ಪೇಶ್ವೆಗಳು, ಕೆಳದಿ ಹಾಗೂ ತಿರೂವಾಂಕೂರು ದೊರೆಗಳು ಮಠದಿಂದ ಪ್ರಯೋಜನ ಪಡೆದಿದ್ದಾರೆ. ಮೈಸೂರಿನಲ್ಲಿ ಆಡಳಿತ ನಡೆಸಿದ ರಾಜರುಗಳಾದ ಹೈದರಿ ಅಲಿ, ಟಿಪ್ಪು ಸುಲ್ತಾನ್ ಮತ್ತು ಹೈದರಾಬಾದ್‍ನ ನಿಜಾಮರು ಮಠಕ್ಕೆ ಆಗಮಿಸಿ ಭಕ್ತಿಯನ್ನು ಸಲ್ಲಿಸುತ್ತಿದ್ದರು ಜೊತೆಗೆ ಇಲ್ಲಿಂದ ಮಾರ್ಗದರ್ಶನವನ್ನು ಪಡೆದಿದ್ದಾರೆ. ಇದನ್ನೂ ಓದಿ: ಕೇದಾರನಾಥದಲ್ಲಿ ಶಂಕರಾಚಾರ್ಯ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಇಲ್ಲಿರುವ ಮಠದ ಮಾರ್ಗದರ್ಶನ ಶ್ರೀಮಂತ ಪರಂಪರೆ ಇಂದಿಗೂ ನಡೆದುಕೊಂಡು ಬರುತ್ತಿದೆ. ಶೃಂಗೇರಿ ಮಠವು ಸರ್ವಧರ್ಮ ಸಮನ್ವಯದ ಸಂಕೇತವಾಗಿರುವುದರಿಂದ ನನಗೆ ವೈಯಕ್ತಿಕವಾಗಿ ಹೆಚ್ಚು ಭಕ್ತಿ ಇದೆ. ನಾನು ಪವಿತ್ರವಾದ ಪೀಠದಿಂದ ಪಡೆದಂತಹ ಆಶೀರ್ವಾದಗಳಿಗೆ ಸದಾ ಚಿರಋಣಿಯಾಗಿದ್ದೇನೆ.

ಶಂಕರಾಚಾರ್ಯರ ಪ್ರತಿಮೆಯನ್ನು ನೋಡಲು ನಾನು ಶೀಘ್ರದಲ್ಲಿ ಕೇದಾರನಾಥಕ್ಕೆ ತೆರಲುತ್ತೇನೆ. ಈ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ರೂಪಿಸಿರುವುದು ತುಂಬಾ ಸಂತೋಷದ ವಿಷಯವಾಗಿದೆ. ಇದರೊಂದಿಗೆ ಕರ್ನಾಟಕದ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯಿಂದ ಕಪ್ಪುಶಿಲೆಯನ್ನು ಪ್ರತಿಮೆಗಾಗಿ ಬಳಸಲಾಗಿದೆ ಎಂಬುದು ಗೊತ್ತಾಗಿದೆ. ಶಂಕರಾಚಾರ್ಯರ ಪ್ರತಿಮೆ ರೂಪುಗೊಳ್ಳಲು ಕರ್ನಾಟಕದ ಪಾತ್ರ ದೊಡ್ಡದಿದೆ. ಎಲ್ಲವೂ ದೇವರ ಕೃಪೆ. ಪರಮಾತ್ಮನ ಕೃಪೆ ನಿಮ್ಮ ಮೇಲಿರಲಿ. ಇದನ್ನೂ ಓದಿ: ರಾಹುಲ್ ಗಾಂಧಿ ಎಲ್ಲಿ ಹೋಗಿದ್ದಾರೆ ಕಾಣಿಸ್ತಿಲ್ಲ: ಸುಧಾಕರ್ ಪ್ರಶ್ನೆ

Share This Article
Leave a Comment

Leave a Reply

Your email address will not be published. Required fields are marked *