ಹೆಚ್‍ಡಿಕೆಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ-ಐಸಿಯು ನಲ್ಲಿ ಚಿಕಿತ್ಸೆ ಮುಂದುವರಿಕೆ

Public TV
1 Min Read

ಬೆಂಗಳೂರು: ಬನ್ನೇರುಘಟ್ಟದಲ್ಲಿರೋ ಅಪೋಲೋ ಆಸ್ಪತ್ರೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ನಡೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

ಹತ್ತು ವರ್ಷದ ಹಿಂದೆ ಹೃದಯನಾಳಕ್ಕೆ ಆಳವಡಿಸಿದ್ದ ಟಿಶ್ಯೂ ವಾಲ್ವ್ ಬದಲಾವಣೆ ಮಾಡಲಾಗಿದೆ. 45 ನಿಮಿಷಗಳ ಕಾಲ ನಡೆದ ಆಪರೇಷನ್ ಪೂರ್ಣ ಪ್ರಮಾಣದಲ್ಲಿ ಮುಗಿದಿದ್ದು, ಕುಮಾರಸ್ವಾಮಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮಧ್ಯಾಹ್ನ 12.30ರ ಮೇಲೆ ಕುಮಾರಸ್ವಾಮಿಯವರನ್ನ ವಾರ್ಡ್‍ಗೆ ಶಿಫ್ಟ್ ಮಾಡಲಿದ್ದು ಅಲ್ಲಿವರೆಗೂ ಅವರನ್ನ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗುತ್ತೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.

ಕುಮಾರಸ್ವಾಮಿ ಅವರು ಬೇಗ ಗುಣಮುಖರಾಗಲಿ ಅಂತ ಜೆಡಿಎಸ್ ಕಾರ್ಯಕರ್ತರು ರಾಜ್ಯದ ಹಲವೆಡೆ ಪೂಜೆ ಪುನಸ್ಕಾರ ನಡೆಸಿದ್ರು. ವಿಜಯಪುರದಲ್ಲಿ ಜೆಡಿಎಸ್ ಮುಖಂಡ ದೇವಾನಂದ ಚವ್ಹಾಣ ಹಾಗೂ ಇನ್ನಿತರರು ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು.

ಮಂಡ್ಯದ ವಿದ್ಯಾನಗರದಲ್ಲಿರುವ ವಿದ್ಯಾ ಗಣಪತಿ ದೇವಾಲಯದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಮೊದಲು ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಈಗ ದೇವಾಲಯದ ಆವರಣದಲ್ಲಿ ಮೃತ್ಯುಂಜಯ ಹೋಮ ಕೈಗೊಂಡಿದ್ದಾರೆ. ಹಾಗೇ ಮೈಸೂರಿನಲ್ಲಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ನೇತೃತ್ವದಲ್ಲಿ ಮೈಸೂರು ಅರಮನೆ ಬಳಿಯ ಕೋಟೆ ಆಂಜನೇಯಸ್ವಾಮಿ ಹಾಗೂ ವಿನಾಯಕಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

 

Share This Article
Leave a Comment

Leave a Reply

Your email address will not be published. Required fields are marked *