ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ: ಎಚ್‍ಡಿಕೆ

Public TV
3 Min Read

– ನಿಮ್ಹಾನ್ಸ್ ಘಟಿಕೋತ್ಸವದಲ್ಲಿ ಕನ್ನಡಕ್ಕೆ 3ನೇ ಸ್ಥಾನ
– ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ
– ಕರ್ನಾಟಕದಲ್ಲಿ ಕನ್ನಡವೇ ಮೊದಲು

ಬೆಂಗಳೂರು: ಭಾನುವಾರ ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) NIMHANS 25ನೇ ಘಟಿಕೋತ್ಸವದಲ್ಲಿ ಕನ್ನಡಕ್ಕೆ ಅಪಮಾನ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಹಾಗೂ ಸಂಸದರಿದ್ದ ವೇದಿಕೆಯಲ್ಲೇ ಕನ್ನಡವನ್ನು ಮೂರನೇ ಸ್ಥಾನಕ್ಕಿಳಿಸದಿರುವುದು ಅಕ್ಷಮ್ಯ ಎಂದಿದ್ದಾರೆ. ಇದನ್ನೂ ಓದಿ: ಮದುವೆಗಾಗಿ ಮತಾಂತರ ತಪ್ಪು: ಮೋಹನ್ ಭಾಗವತ್

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ, ಇಂಗ್ಲೀಷ್‍ಗೆ ದ್ವಿತೀಯ ಸ್ಥಾನ, ಕನ್ನಡಕ್ಕೆ ಮೂರನೇ ಸ್ಥಾನ. ಅಯ್ಯೋ ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ ಎಂದು ಸೋಶಿಯಲ್ ಮೀಡಿಯಾ ಮೂಲಕವಾಗಿ ಕನ್ನಡ ಭಾಷೆಗೆ ಆಗಿರುವ ಅಪಮಾನವನ್ನು ಖಂಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್ ಸೇರ್ತಾರಾ ಬಾಬುರಾವ್ ಚಿಂಚನಸೂರ್..?

ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:   ನಮ್ಮ ರಚನಾತ್ಮಕ ಸಲಹೆಗಳನ್ನು ಚೀನಾ ಒಪ್ಪಿಲ್ಲ: ಭಾರತೀಯ ಸೇನೆ

ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ಇದನ್ನೂ ಓದಿ: ತೆಂಗಿನಕಾಯಿ ತದ್ರೂಪಿ ಸೃಷ್ಠಿ ಯತ್ನ ಯಶಸ್ವಿ

ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ? ಎಂದು ವಿರೋಧ ಪಕ್ಷವನ್ನು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಕೋವಿಡ್ ಲಸಿಕೆಗೆ ನೊಬೆಲ್ ಪ್ರಶಸ್ತಿ ಮಿಸ್ – ರಹಸ್ಯ ಬೆಳಕಿಗೆ

ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ರಾಜಕಾರಣದಲ್ಲೂ ಕನ್ನಡಿಗರಿಗೆ ಪಂಗನಾಮ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ನುಡಿದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *