ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ನಮಗೂ ಬಂದಿಲ್ಲ- ಹೆಚ್‍ಡಿಕೆ ಗರಂ

By
1 Min Read

ಬೆಂಗಳೂರು: ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ನಮಗೂ ಬಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಬಿಜೆಪಿ (BJP) ಜೊತೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ `ದಾರಿದ್ರ್ಯ’ ಅಭಿಪ್ರಾಯಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಸುನೀಲ್ ಕುಮಾರ್ ಹೇಳೀಕೆಗೆ ಪ್ರತಿಕ್ರಿಯಿಸಿದ ಅವರು, ಸದನದಲ್ಲಿ ಅವರು ಅಧಿಕೃತ ವಿರೋಧ ಪಕ್ಷ ಅಲ್ಲಿ ಮಾತ್ರ ಕೈ ಜೋಡಿಸಿದ್ದೇವೆ. ಕಾರ್ಯಕರ್ತರಿಗೆ ನಾಡಿನ ಜನರಿಗೆ ಹೇಳೋಕೆ ಬಯಸುತ್ತೇನೆ. ನಮ್ಮ ಪಕ್ಷ ಅವರ ಜೊತೆ ಮೈತ್ರಿ ಮಾಡಿಕೊಂಡಿಲ್ಲ ಭಿಕ್ಷೆ ಬೇಡಿಕೊಂಡು ನಮ್ಮ ಪಕ್ಷ ಹಿಂದೆ ಹೋಗಲ್ಲ. ರಾಜ್ಯಕ್ಕೆ ಕಾಂಗ್ರೆಸ್ ನಿಂದ ಎಷ್ಟು ಹಾನಿ ಆಗಿದೆಯೋ ಬಿಜೆಪಿಯಿಂದಲೂ ಅಷ್ಟೆ ಆಗಿದೆ ಎಂದರು.

ಸುನಿಲ್ ಕುಮಾರ್ ಹೇಳಿದ್ದೇನು..?: ಜೆಡಿಎಸ್ ಜೊತೆಗೆ ಮೈತ್ರಿ ಕೇವಲ ಊಹಾಪೋಹ. ಬಿಜೆಪಿ ನೇತೃತ್ವದ ಎನ್‍ಡಿಎ ಸಭೆಗೆ ಜೆಡಿಎಸ್ ಪಕ್ಷವನ್ನು ಆಹ್ವಾನಿಸಿರಲಿಲ್ಲ. ಅಂತಹ ಚರ್ಚೆ ನಮ್ಮ ಪಕ್ಷದಲ್ಲಿ ಇಲ್ಲ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ಅನಿವಾರ್ಯತೆ ಬಿಜೆಪಿಗೇನೂ ಕಾಣುತ್ತಿಲ್ಲ ಎಂದು ಹೇಳಿದ್ದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್