ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಹೆಚ್‌ಡಿಕೆ

Public TV
1 Min Read

– ಮಂಡ್ಯ ಜಿಲ್ಲೆ ಸೇರಿ ರಾಜ್ಯದ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ನವದೆಹಲಿ: ಮಂಡ್ಯ ಲೋಕಸಭೆ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಗಡ್ಕರಿ ಅವರ ದೆಹಲಿ ನಿವಾಸಕ್ಕೆ ತಮ್ಮ ಆಪ್ತ ಅಧಿಕಾರಿಗಳ ಜೊತೆ ತೆರಳಿ ಭೇಟಿ ಮಾಡಿದ ಕುಮಾರಸ್ವಾಮಿ ಅವರು, ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಕಾರ್ಯಗತ ಆಗುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ ಕೇಸ್ – ಆರೋಪಿಯನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಈಗಾಗಲೇ ಹಲವಾರು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಹೆದ್ದಾರಿ ಸಚಿವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಸಚಿವರು ಹೆದ್ದಾರಿ ಸಚಿವರೊಂದಿಗೆ ಚರ್ಚಿಸಿದರು. ಇದನ್ನೂ ಓದಿ: ಜಿಎಸ್‌ಟಿ ಪರಿಷ್ಕರಣೆ – 12%, 28% ಸ್ಲ್ಯಾಬ್‌ ತೆಗೆಯಲು ಸಚಿವರ ಸಮಿತಿ ಒಪ್ಪಿಗೆ

ಇದೇ ವೇಳೆ ಪಾಂಡವಪುರ ಸಕ್ಕರೆ ಕಾರ್ಖಾನೆ ಸಮೀಪದ ಸಿಡಿಎಸ್ ಕಾಲುವೆಯಿಂದ ದಸರಗುಪ್ಪೆ ನೀರು ಸಂಸ್ಕರಣ ಘಟಕದವರೆಗೂ ನಾಲ್ಕು ಪಥದ ಹೆದ್ದಾರಿಯ ಅಭಿವೃದ್ಧಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದರು.  ಇದನ್ನೂ ಓದಿ: ಎಎಸ್ಪಿ ಕಾರಿಗೆ ಡಿಕ್ಕಿ – ತಿಮರೋಡಿಯ ಮೂವರು ಬೆಂಬಲಿಗರು ಅರೆಸ್ಟ್

Share This Article