ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗಲ್ಲ: ಹೆಚ್‌ಡಿಕೆ

Public TV
3 Min Read

– ನಿಖಿಲ್‌ ಗೆಲುವಿಗೆ ತಾಯಿ ಚಾಮುಂಡಿ ಆಶೀರ್ವಾದ ಇದೆ ಎಂದ ಸಚಿವ

ಮೈಸೂರು: ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗೆ ಯಾವ ಕಣ್ಣೀರು ಬರಲ್ಲ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಾಂಗ್ರೆಸ್‌ (H.D.Kumaraswamy) ನಾಯಕರಿಗೆ ತಿರುಗೇಟು ನೀಡಿದರು.

ಮೈಸೂರಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಬಳಿಕ ಸುತ್ತೂರು ಮಠಕ್ಕೆ ಭೇಟಿ ನೀಡಿದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಹೆಚ್‌ಡಿಕೆ ಕಣ್ಣೀರಿನ ಬಗ್ಗೆ ಕಾಂಗ್ರೆಸ್ ನಾಯಕರ (Congress Leaders) ಲೇವಡಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಪಟಾಕಿ ಸಿಡಿತದಿಂದ ಜನರ ಕಣ್ಣಿಗೆ ಕುತ್ತು – ಮಿಂಟೋ ಆಸ್ಪತ್ರೆಯಲ್ಲಿ 29 ಮಂದಿಗೆ ಚಿಕಿತ್ಸೆ

ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಕಣ್ಣೀರು ಹಾಕಿರುವುದು ಅನುಕಂಪ ಗಿಟ್ಟಿಸಿಕೊಳ್ಳುವುದಕ್ಕಲ್ಲ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ. ರಾಜಕಾರಣದಲ್ಲಿ ಕಟುಕರಿದ್ದಾರೆ. ಭಯ ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರುವುದಿಲ್ಲ. ಕಟುಕರಿಗೆ ಯಾವ ಕಣ್ಣೀರು ಬರುವುದಿಲ್ಲ ಎಂದು ತಿರುಗೇಟು ನೀಡಿದರು.

ಪ್ರಧಾನಿ ಮೋದಿ (PM Modi) ಬಗ್ಗೆ ರಾಜಕೀಯ ಪುಡಾರಿ ಎಂಬ ಸಿಎಂ ಟೀಕೆ ವಿಚಾರಕ್ಕೆ ಉತ್ತರಿಸಿದ ಹೆಚ್‌ಡಿಕೆ, ಸಿದ್ದರಾಮಯ್ಯನವರು ಯಾವ ರೀತಿ ಮಾತನಾಡುತ್ತಿದ್ದಾರೆ? ಅವರನ್ನ ಪುಡಾರಿ ಅನ್ನೋದಾದ್ರೆ ಇವರು ಅದೇ ರೀತಿ ಅಲ್ಲವೇ ಮಾತನಾಡುತ್ತಿರೋದು ಎಂದು ಕುಟುಕಿದರು. ಇದನ್ನೂ ಓದಿ: ಸ್ನೇಹಿತ ಅಂತ ನಂಬಿ ಮೊಬೈಲ್‌ ಕೊಟ್ಟ ಮಹಿಳೆ – ಆಕೆಯ ಬೆತ್ತಲೆ ವೀಡಿಯೋ ರೆಕಾರ್ಡ್‌ ಮಾಡಿ ಬ್ಲ್ಯಾಕ್‌ಮೇಲ್‌

ಚಕ್ರವ್ಯೂಹ ರಚಿಸುವ ಪ್ರಯತ್ನ ನಡೆದಿತ್ತು:
ಚನ್ನಪಟ್ಟಣ ಉಪಚುನಾವಣೆ ಪ್ರಚಾರ ಕುರಿತು ಮಾತನಾಡಿದ ಹೆಚ್‌ಡಿಕೆ, ಉಪಚುನಾವಣೆಯ ಪ್ರಚಾರ ಬಿರುಸುನಿಂದ ಸಾಗಿದೆ. ತಾಯಿ ಚಾಮುಂಡಿ ಆಶೀರ್ವಾದದಿಂದ ಈ ಬಾರಿ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲ. ಚನ್ನಪಟ್ಟಣದಲ್ಲಿ ಈ ಬಾರಿ ಚಕ್ರವ್ಯೂಹ ರಚಿಸಲು ಆರಂಭದಲ್ಲಿ ಪ್ರಯತ್ನ ಮಾಡಿದ್ರು. ಆದ್ರೆ ಸಾಧ್ಯವಾಗಲಿಲ್ಲ, ಪಕ್ಷದ ಹಿತ ದೃಷ್ಟಿಯಿಂದ ಈ ಬಾರಿ ನಿಖಿಲ್ ಸ್ಪರ್ಧೆ ಅನಿರ್ವಾಯವಾಯಿತು ಎಂದು ಹೇಳಿದರು.

ಪಕ್ಷದ ಚಟುಚಟಿಕೆಯಿಂದ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರು ದೂರ ಉಳಿದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಜಿ.ಟಿ ದೇವೇಗೌಡರಿಗೆ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳಿವೆ. ಹೀಗಾಗಿ ಅವರು ಉಪಚುನಾವಣೆಯಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಜಿ.ಟಿ ದೇವೇಗೌಡರು ಸಹ ನಿಖಿಲ್ ಗೆಲುವಿಗೆ ಶ್ರಮಿಸುತ್ತಾರೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ರಾಜ್ಯದಲ್ಲಿ ನಿಲ್ಲದ ವಕ್ಫ್ ಅವಾಂತರ – ಹಿಂದೂ ಅಷ್ಟೇ ಅಲ್ಲ, ಮುಸ್ಲಿಮರ ಪಹಣಿಯಲ್ಲೂ ವಕ್ಫ್!

ಇನ್ನೂ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಪರಿಷ್ಕರಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪರಮೇಶ್ವರ್ ಅವರು ಗ್ಯಾರಂಟಿ ಮುಂದುವರಿಯುತ್ತೆ ಅಂತ ಹೇಳಲ್ಲ. ಮುಂದಿನ ಮೂರು ವರ್ಷ ನಡೆಸುತ್ತೇವೆ ಅಂತಾರೆ. ಜನರೇ ಬೇಡ ಅಂತಿದ್ದಾರೆ ಎಂದು ಹೇಳಿ ಜನರ ಹೆಸರೇಳಿ ಸಬೂಬು ಕೊಡ್ತಾ ಇದ್ದಾರೆ. ಜನರಲ್ಲಿ ಸರ್ಕಾರವನ್ನು ದಿವಾಳಿಯತ್ತ ತೆಗೆದುಕೊಂಡು ಹೋಗುತ್ತಿದ್ದಾರೆ ಅನ್ನೋ ಚರ್ಚೆ ಇದೆ. ಆದರೆ ರಾಜ್ಯದ ಜನರು ದಿವಾಳಿಯತ್ತ ತೆಗೆದುಕೊಂಡು ಹೋಗಲು ಬಿಡಲ್ಲ. ಇವರು ಆ ರೀತಿ ಆಡಳಿತ ನಡೆಸದಿದ್ದರೆ ಸಾಕು. ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಮಾಡಬಹುದು, ಆದ್ರೆ ಕಾಂಗ್ರೆಸ್‌ಗೆ ಅದು ಬೇಕಾಗಿಲ್ಲ. ಅದಕ್ಕಾಗಿ ಕೆಲ ಯೋಜನೆ ಸ್ಥಗಿತ ಅಂತಾರೆ ಆಮೇಲೆ ಸ್ಪಷ್ಟನೆ ಕೊಡ್ತಾರೆ ಎಂದು ಅಸಮಾಧಾನ ಹೊರಹಾಕಿದರು.

Share This Article