– ಮಾಡಿದ ತಪ್ಪುಗಳನ್ನೇ ಮತ್ತೆ ಮಾಡುವುದಿಲ್ಲ ಎಂದ ಹೆಚ್ಡಿಕೆ
ನವದೆಹಲಿ: ಸಚಿವ ಜಮೀರ್ ಅಹಮದ್ (Zameer Ahmed Khan) ಜೆಡಿಎಸ್ ಪಕ್ಷಕ್ಕೆ ಸೇರುತ್ತಾರೆಯೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ನೇರ ಉತ್ತರ ನೀಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು, ಕಾಂಗ್ರೆಸ್ ಪಕ್ಷದ ಯಾರೋಬ್ಬರೂ ನನ್ನ ಸಂಪರ್ಕದಲ್ಲಿ ಇಲ್ಲ. ಹಾಗಿದ್ದ ಮೇಲೆ ಅವರು ಪಕ್ಷ ಸೇರುವ ಮಾತೆಲ್ಲಿಂದ ಬರಬೇಕು? ಇದೆಲ್ಲವೂ ಗಾಳಿಸುದ್ದಿಯಷ್ಟೇ ಎಂದು ಈವರೆಗೆ ಕೆಲವರು ತೇಲಿಬಿಟ್ಟಿದ್ದ ಸುದ್ದಿಗಳಿಗೆ ತೆರೆ ಎಳೆದರು.
ಪಕ್ಷಕ್ಕೆ ಯಾರನ್ನ ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ನಾನ್ತಾನೇ ನಿರ್ಧಾರ ಕೈಗೊಳ್ಳಬೇಕು. ನನ್ನ ಸಂಪರ್ಕಕ್ಕೇ ಯಾರೂ ಬಂದಿಲ್ಲ ಎಂದ ಮೇಲೆ ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತೆಲ್ಲಿ ಬರುತ್ತದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್ ಠಾಕೂರ್
ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳ ಫಲಿತಾಂಶ ಏನಾಗುತ್ತದೋ ನೋಡೋಣ. ಫಲಿತಾಂಶ ಬರುವ ಮುನ್ನವೇ ಯಾಕೆ ಅನುಮಾನ? ಅಲ್ಪಸಂಖ್ಯಾತರನ್ನ ನಾವೇ ರಕ್ಷಣೆ ಮಾಡುವವರು ಎನ್ನುವ ಕಾಂಗ್ರೆಸ್ ಯಾಕೆ ಗೊಂದಲ ಮಾಡುತ್ತಿದೆ? ಒಂದು ಸಮುದಾಯದ ಮೇಲೆ ಯಾಕೆ ಗದಾಪ್ರಹಾರ ನಡೆಸುತ್ತಿದ್ದಾರೆ? ಎಂದು ಅವರು ಪ್ರಶ್ನಿಸಿದರು.
ನನಗೂ ನೀವು ಹೇಳಿದ ವ್ಯಕ್ತಿಗೂ ಸಂಪರ್ಕ ಇಲ್ಲ. ಜೆಡಿಎಸ್ ಜೊತೆಗೆ ಯಾರೂ ಸಂಪರ್ಕ ಸಾಧಿಸಿಲ್ಲ. ನಾವು ಮಾಡಿದ ತಪ್ಪುಗಳನ್ನೇ ಮತ್ತೆ ಮಾಡುವುದಿಲ್ಲ. ಇನ್ನೊಂದು ಪಕ್ಷದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟುಗಳನ್ನ ಲಾಭ ಮಾಡಿಕೊಳ್ಳುವ ಮನಸ್ಥಿತಿ ನಮ್ಮದಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್, ಸಿಪಿಎಂನಿಂದ ದೂರು


