– ಅನಾರೋಗ್ಯದ ನಡುವೆಯೂ ಪಕ್ಷದ ಪ್ರಚಾರ ಕಾರ್ಯದಲ್ಲಿ ಆ್ಯಕ್ಟಿವ್
ಬೆಂಗಳೂರು: ಚುನಾವಣಾ ಪ್ರಚಾರದಲ್ಲಿ ಅತಿಯಾಗಿ ತೊಡಗಿಸಿಕೊಂಡ ಕಾರಣ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆ ಸೇರಿದ್ದರೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು, ಚುನಾವಣೆ ಕಾರ್ಯಗಳಲ್ಲಿ ಹೆಚ್ಚು ಕ್ರಿಯಾಶೀಲರಾಗಿದ್ದಾರೆ.
ಆಸ್ಪತ್ರೆಯಲ್ಲಿದ್ದುಕೊಂಡೇ ಕುಮಾರಸ್ವಾಮಿ ಅವರು ಜೆಡಿಎಸ್ ಪ್ರಚಾರದ ರೂಟ್ ಮ್ಯಾಪ್ ಸಿದ್ಧಪಡಿಸುತ್ತಿದರು. ಅನಾರೋಗ್ಯದ ನಡುವೆಯೂ ಹೆಚ್‌ಡಿಕೆ ಚುನಾವಣಾ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆ ಮೇರೆಗೆ ಶನಿವಾರ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಹಿನ್ನೆಲೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಮೇಲಿನ ಆರೋಪ ಇಡೀ ಕುರುಬ ಸಮಾಜಕ್ಕೆ ಮಾಡ್ತಿರೋ ಅವಮಾನವಲ್ಲವೇ – ಕಾಂಗ್ರೆಸ್ ಪ್ರಶ್ನೆ
ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ಕುಮಾರಸ್ವಾಮಿ ತಿಳಿಸಿದ್ದರು. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದರು.