‘ಪವಿತ್ರ’ ಮತ್ತು ‘ಸುಭದ್ರ’ ಸರ್ಕಾರಕ್ಕೆ ಮುದ್ರೆ ಒತ್ತಿದ್ದಕ್ಕೆ ಅಭಿನಂದನೆಗಳು- ಹೆಚ್‍ಡಿಕೆ ಲೇವಡಿ

Public TV
1 Min Read

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಲೇವಡಿ ಮಾಡುವ ಮೂಲಕ  ಬಿಜೆಪಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಇದೊಂದು ”ಅಸಹ್ಯ” ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು ‘ಪವಿತ್ರ’ ಮತ್ತು ‘ಸುಭದ್ರ’ ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು. ಕುರುಡು ಕಾಂಚಾಣ ಕುಣಿಯುತಲಿತ್ತು, ಕಾಲಿಗೆ ಬಿದ್ದವರ ತುಳಿಯುತಲಿತ್ತು ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೆಡವಲು ಕಾರಣರಾದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿದೆ. ಇದರ ಫಲಿತಾಂಶ ಇಂದು ಹೊರ ಬಿದ್ದಿದ್ದು, 12 ಕಡೆಗಳಲ್ಲಿ ಕಮಲ ಅರಳಿದೆ. ಅದರಲ್ಲಿಯೂ ಜೆಡಿಎಸ್ ಭದ್ರ ಕೋಟೆಯಾಗಿದ್ದ ಮಂಡ್ಯದ ಕೆ ಆರ್ ಪೇಟೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಜಯಗಳಿಸಿರುವುದು ಅಚ್ಚರಿ ಮೂಡಿಸಿದೆ. ಹುಣಸೂರು ಹಾಗೂ ಶಿವಾಜಿನಗರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ್ದು, ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಜಯಗಳಿಸಿದ್ದಾರೆ.

Share This Article
1 Comment

Leave a Reply

Your email address will not be published. Required fields are marked *