ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಅಪಘಾತದಲ್ಲಿ ಗಾಯಗೊಂಡಿದ್ದ ಎಂಜಿನಿಯರ್ ಸಾವು

1 Min Read

ಚಿಕ್ಕಬಳ್ಳಾಪುರ: ಎರಡು ಬೈಕ್‌ಗಳ (Bike) ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತದಲ್ಲಿ ಗಾಯಗೊಂಡಿದ್ದ ಸಾಫ್ಟ್‌ವೇರ್‌ ಎಂಜಿನಿಯರ್ (Software Engineer) ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ನಂದಿಗಿರಿಧಾಮ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ (Muddenahalli) ಬಳಿ ಎರಡು ದಿನಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಎಂಜಿನಿಯರ್ ನಿತಿನ್ (25) ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ನಿತಿನ್ ಚಿಕ್ಕಬಳ್ಳಾಪುರ ನಗರದ ನಿವಾಸಿಯಾಗಿದ್ದು, ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಯುಗಾದಿ ಹಬ್ಬದ ಹೊಸ ತೊಡಕು ದಿನವಾದ ಶುಕ್ರವಾರದಂದು ಸ್ನೇಹಿತನ ಜೊತೆಯಲ್ಲಿ ಹಬ್ಬದ ಊಟಕ್ಕೆ ಹೋಗಿದ್ದು, ನಂತರ ವಾಪಸ್ ಚಿಕ್ಕಬಳ್ಳಾಪುರ ಕಡೆಗೆ ಬರುವಾಗ ಮುದ್ದೇನಹಳ್ಳಿ ಬಳಿಯ ವಿಟಿಯು ಕಾಲೇಜು ಸಮೀಪ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಮಿನಿಸ್ಟರ್ Vs MLA ವಾರ್ – ಸ್ವಪಕ್ಷೀಯ ಸಚಿವರ ವಿರುದ್ಧವೇ ಸರ್ಕಾರಿ ಜಮೀನು ನುಂಗಿದ ಆರೋಪ: ರಮೇಶ್ ಬಂಡಿಸಿದ್ದೇಗೌಡ

ಇನ್ನೂ ನಿತಿನ್ ಹಾಗೂ ಸ್ನೇಹಿತ ಇಬ್ಬರು ಬಜಾಜ್ ಚೇತಕ್‌ನಲ್ಲಿ ಬರುವಾಗ ಚಿಕ್ಕಬಳ್ಳಾಪುರ ಕಡೆಯಿಂದ ಮುಂಬದಿಯಲ್ಲಿ ಬಂದ ಟಿವಿಎಸ್ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ವಾಹನ ಚಾಲನೆ ಮಾಡುತ್ತಿದ್ದ ನಿತಿನ್ ತಲೆಗೆ ಗಂಭೀರ ಗಾಯಗಳಾಗಿತ್ತು. ಗಾಯಗೊಂಡಿದ್ದ ನಿತಿನ್‌ನನ್ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಜೊತೆಯಲ್ಲಿದ್ದ ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಮೇ ತಿಂಗಳಲ್ಲಿ ಪಿಂಕ್ ಲೈನ್ ಸಂಚಾರಕ್ಕೆ ಮುಕ್ತ

Share This Article