ಕಾನೂನು ತಂದು, ದಂಡ ಹಾಕಿ ಜನರಿಗೆ ಲಸಿಕೆ ಕೊಡುವ ಚಿಂತನೆ ಸರ್ಕಾರಕ್ಕಿಲ್ಲ: ಸುಧಾಕರ್

Public TV
3 Min Read

ಬೆಂಗಳೂರು: ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ತೀವ್ರತೆಯ ಕುರಿತಾಗಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಇಲಾಖೆ ಸಮಿತಿ ಸಭೆ ಮಾಡಲಾಗಿದೆ. ಸಭೆಯಲ್ಲಿ ವ್ಯಾಕ್ಸಿನೇಷನ್ ಕಡ್ಡಾಯವಲ್ಲ ಎಂದು ಚರ್ಚಿಸಲಾಗಿದೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಭೆಗೆ ಪೂರಕವಾಗಿ ಸಭೆ ಆಗಿದೆ. ಓಮಿಕ್ರಾನ್ ಹೊಸ ತಳಿ ನಿಯಂತ್ರಣದ ಬಗ್ಗೆ ಚರ್ಚೆ ಆಗಿದ್ದು, ಒಂದು ವೇಳೆ ವೈರಸ್ ಬಂದರೆ ಅದಕ್ಕೆ ಸಿದ್ಧತೆ ಹೇಗೆ ಇರಬೇಕು ಅಂತ ಚರ್ಚೆ ಮಾಡಿದ್ದೇವೆ. ವೈದ್ಯರು, ಆಸ್ಪತ್ರೆಗಳ ಸಿದ್ಧತೆ, ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಸಿದ್ಧತೆ ಬಗ್ಗೆ ಚರ್ಚೆ ಆಗಿದೆ. ಮೊದಲು ಕ್ವಾರಂಟೈನ್ ಇತ್ತು, ಈಗ ಅದನ್ನ ಮತ್ತೆ ಜಾರಿ ಮಾಡುತ್ತೇವೆ. ವಿದೇಶದಿಂದ ಬರೋ ಎಲ್ಲರಿಗೂ RTPCR ಟೆಸ್ಟ್ ಮಾಡುತ್ತೇವೆ. ನೆಗೆಟಿವ್ ಬಂದರೆ ಮನೆಯಲ್ಲಿ ಒಂದು ವಾರ ಕ್ವಾರಂಟೈನ್ ಇರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬನ್ನಿ ದೇವೇಗೌಡ್ರೇ… ಇಲ್ಲಿ ಕುಳಿತುಕೊಳ್ಳಿ: ಪ್ರಧಾನಿ ಮೋದಿ

ರೋಗದ ಲಕ್ಷಣ ಇದ್ದರೆ 5ನೇ ದಿನ ಟೆಸ್ಟ್ ಮಾಡುತ್ತೇವೆ. ರೋಗದ ಲಕ್ಷಣ ಇಲ್ಲದೆ ಹೋದರೆ 7 ನೇ ದಿನ ಟೆಸ್ಟ್ ಮಾಡಿ ಹೊರಗೆ ಓಡಾಟ ಮಾಡಲು ಅವಕಾಶ ಕೊಡುತ್ತೇವೆ. ಟೆಲಿ ಮೆಡಿಸಿನ್, ಟೆಲಿ ಕೌನ್ಸಿಲಿಂಗ್ ಸಿದ್ಧತೆ ಮಾಡಿಕೊಳ್ಳುತ್ತೇವೆ. ಚಿಕಿತ್ಸೆಗೆ ಯುನಿಫಾರ್ಮ್ ವ್ಯವಸ್ಥೆ ಮಾಡಲು ತಂಡ ರಚನೆ ಮಾಡಲಾಗುತ್ತದೆ. ಚಿಕಿತ್ಸೆ ಪ್ರೋಟೋ ಕಾಲ್‍ಗೆ ತಂಡ ರಚನೆಯಾಗಿದ್ದು, ಡಾ. ರವಿ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಯಲ್ಲಿ 10 ಜನ ಇರುತ್ತಾರೆ. ಅಗತ್ಯ ಔಷಧಿ ದಾಸ್ತಾನು ಬಗ್ಗೆ ಸಭೆ ಆಗಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಸಿದ್ದರಾಮಯ್ಯ, ಜಿಟಿಡಿ ನಡುವಿನ ಹೊಸ ಲವ್ ಸಕ್ಸಸ್ ಆಗಲ್ಲ: ಎಸ್.ಟಿ. ಸೋಮಶೇಖರ್

ಲಸಿಕೆ ಕಡ್ಡಾಯವಾಗಿ 41 ಲಕ್ಷ ಜನ ಎರಡನೇ ಡೋಸ್ ಪಡೆಯಬೇಕು. ಇವರಿಗೂ ಪ್ರತಿ ಜಿಲ್ಲೆಯಲ್ಲಿ ಲಸಿಕೆ ಆದ್ಯತೆ ಮೇಲೆ ಕೊಡುತ್ತೇವೆ. ಇವರಿಗೆ ಲಸಿಕೆ ಕೊಟ್ರೆ 70% ಲಸಿಕೆ ಆಗುತ್ತೆ. ಹೀಗಾಗಿ ಲಸಿಕೆ ನೀಡಲು ಕ್ರಮ ತಗೋತೀವಿ. ಓಮಿಕ್ರಾನ್ ಹರಡುವಿಕೆ ಪ್ರಮಾಣ ಹೆಚ್ಚಿದೆ. ಅದರ ತೀವ್ರತೆ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಜನರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತೇವೆ. ಲಸಿಕೆ ಜನರು ಬಂದು ಪಡೆಯಬೇಕು. ಲಸಿಕೆ ರೋಗ ನಿರೋಧಕ ಸೃಷ್ಟಿ ಮಾಡುತ್ತೆ. ಜನ ಲಸಿಕೆ ಪಡೆಯಬೇಕು. ಹೈರಿಸ್ಕ್ ದೇಶದಿಂದ ಬರೋ ಪ್ರಯಾಣಿಕರಿಗೆ ಕೆಲ ನಿರ್ಬಂಧ ಹಾಕೋ ಬಗ್ಗೆ ಸಿಎಂ ಚಿಂತನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ಕೇಂದ್ರಕ್ಕೆ ಪತ್ರ ಬರೆಯಲು ನಿರ್ಧಾರ ಮಾಡಿದ್ದಾರೆ. ಪ್ರಾರಂಭಿಕ ಹಂತದಲ್ಲಿ ನಿಯಂತ್ರಣ ಮಾಡಲು ಸಿಎಂ ಈ ನಿರ್ಧಾರ ಮಾಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಕುರಿತು ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ನಿತ್ಯ ವಿದೇಶದಿಂದ 2.5 ಸಾವಿರ ಜನ ಬೆಂಗಳೂರಿಗೆ ಬರ್ತಾರೆ. ಎಲ್ಲರಿಗೂ RTPCR ಟೆಸ್ಟ್ ಕಡ್ಡಾಯ ಮಾಡಲಾಗುತ್ತೆ ಎಂದರು.

 ಲಸಿಕೆ ಪಡೆಯದೇ ಹೋದರೆ ಸರ್ಕಾರಿ ಸೌಲಭ್ಯ ನೀಡಬಾರದು ಅನ್ನೋ ಶಿಫಾರಸು ವಿಚಾರವಾಗಿ ಮಾತನಾಡಿದ ಅವರು, ಜನರಿಗೆ ಕಾನೂನು ತಂದು, ದಂಡ ಹಾಕಿ ಲಸಿಕೆ ಕೊಡೊ ಚಿಂತನೆ ಸರ್ಕಾರಕ್ಕೆ ಇಲ್ಲ. ಆದರೆ ಎರಡನೇ ಡೋಸ್ ಲಸಿಕೆ ಪಡೆಯದೇ ಇರೋರಿಗೆ ಆಸ್ಪತ್ರೆ ವೆಚ್ಚ ಭರಿಸಬಾರದು ಅಂತ ಸಮಿತಿ ಶಿಫಾರಸ್ಸು ಮಾಡಿದೆ. ಇದರ ಜೊತೆ ಅನೇಕ ಶಿಫಾರಸು ತಜ್ಞರ ತಂಡ ಮಾಡಿದೆ. ಮಾಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡೋರಿಗೆ ಎರಡು ಡೋಸ್ ಲಸಿಕೆ ಕಡ್ಡಾಯ ಮಾಡೋ ಬಗ್ಗೆ ಶಿಫಾರಸು ಮಾಡಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *