Haveri | ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತ – ಚಾಲಕ ಸಾವು

Public TV
1 Min Read

ಹಾವೇರಿ: ಶಾಲಾ ಬಸ್ (School Bus) ಚಾಲನೆ ವೇಳೆಯೇ ಹೃದಯಾಘಾತದಿಂದ (Heart Attack) ಚಾಲಕ ಮೃತಪಟ್ಟ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು (Savanur) ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ನಡೆದಿದೆ.

ಪಕ್ಕಿರೇಶ ಮಲ್ಲೇಶಣ್ಣನವರ್ (25) ಮೃತ ಚಾಲಕ. ಖಾಸಗಿ ಶಾಲೆಯ ಬಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ವಾಪಸ್ ಮಕ್ಕಳನ್ನು ಮನೆಗೆ ಡ್ರಾಪ್ ಮಾಡುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ: ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್‌ಗೆ ಪಿತೃ ವಿಯೋಗ

ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಚಾಲಕ ರಸ್ತೆಬದಿಯಲ್ಲಿ ಬಸ್ ನಿಲ್ಲಿಸಿದ್ದಾರೆ. ಈ ವೇಳೆ ಮಕ್ಕಳು ಕೂಗಾಡಿ, ಚೀರಾಡಿ ಸ್ಥಳೀಯರನ್ನು ಕರೆದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಭೂಕಂಪ – ಸುನಾಮಿ ಎಚ್ಚರಿಕೆ

Share This Article