ಧ್ವಂಸಗೊಂಡ ಅಪ್ಪನ ಅಂಗಡಿಯಲ್ಲಿ ಕಾಯಿನ್ ಸಂಗ್ರಹಿಸುತ್ತಿದ್ದ ಬಾಲಕ – ಫೋಟೋ ವೈರಲ್

By
1 Min Read

ನವದೆಹಲಿ: ಜಹಾಂಗೀರ್‌ಪುರಿಯಲ್ಲಿ ಬುಲ್ಡೋಜರ್‌ಗಳಿಂದ ಕಟ್ಟಡಗಳನ್ನು ಧ್ವಂಸ ಮಾಡಲಾಗಿದೆ. ಪರಿಣಾಮ ಹುಡುಗನೊಬ್ಬ ಧ್ವಂಸವಾಗಿದ್ದ ಅಪ್ಪನ ಅಂಗಡಿಯಲ್ಲಿ ಕಾಯಿನ್‍ಗಳನ್ನು ಸಂಗ್ರಹಿಸುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಮನಕರಗುವಂತೆ ಮಾಡಿದೆ.

ಕಳೆದ ಶನಿವಾರ ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ರಾಜಧಾನಿ ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಉಂಟಾಯಿತು. ಇದರಿಂದ ಗಲಭೆಕೋರರಿಗೆ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಬಿಸಿ ಮುಟ್ಟಿಸಲು ಬಿಜೆಪಿ ನೇತೃತ್ವದ ಪಾಲಿಕೆ ಮುಂದಾಗಿತ್ತು. ಕೇಂದ್ರ ಗೃಹ ಇಲಾಖೆಯ ಸೂಚನೆ ಮೇರೆಗೆ ಪೊಲೀಸ್ ಬಿಗಿ ಬಂದೋಬಸ್ತ್‌ನೊಂದಿಗೆ ಪಾಲಿಕೆ ಜಹಾಂಗೀರ್‌ಪುರಿಯಲ್ಲಿ ನೆಲಸಮ ಕಾರ್ಯಾಚರಣೆಯನ್ನು ಚುರುಕುಗೊಳಿಸಿತ್ತು. ಬುಧವಾರ ಬೆಳಗ್ಗಿನಿಂದ 9 ಬುಲ್ಡೋಜರ್‌ಗಳು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುತ್ತಿದ್ದವು. ಇದನ್ನೂ ಓದಿ: ದೆಹಲಿಯಲ್ಲಿ ಹೈಡ್ರಾಮಾ – ಸುಪ್ರೀಂನಿಂದ ತಡೆ ಆದೇಶ ಬಂದ ಬಳಿಕವೂ 2 ಗಂಟೆ ಘರ್ಜಿಸಿದ ಜೆಸಿಬಿ

ಬುಲ್ಡೋಜರ್‌ನಿಂದ ನೆಲಸಮಗೊಂಡಿದ್ದ ತಂದೆಯ ಜ್ಯೂಸ್ ಅಂಗಡಿಯಲ್ಲಿ ಎಂಟು ವರ್ಷದ ಬಾಲಕ ಕಲ್ಲುಮಣ್ಣುಗಳ ರಾಶಿಯಲ್ಲಿ ಬಿದ್ದಿದ್ದ ಕಾಯಿನ್‍ಗಳನ್ನು ಹುಡುಕಿಕೊಂಡು ಸಂಗ್ರಹಿಸುತ್ತಿದ್ದನು. ಈ ಹೃದಯ ವಿದ್ರಾವಕ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಈ ಫೋಟೋ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿದೆ.

ಫೋಟೋವನ್ನು ನೆಟ್ಟಿಗರು ಶೇರ್ ಮಾಡಿಕೊಳ್ಳುತ್ತಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮತ್ತು ದೆಹಲಿ ಪೊಲೀಸರ ಹ್ಯಾಂಡಲ್‍ಗಳನ್ನು ಟ್ಯಾಗ್ ಮಾಡುವ ಮೂಲಕ ಫೋಟೋವನ್ನು ಟ್ವಿಟ್ಟರ್ ಮತ್ತು ಸೋಶಿಯಲ್ ಮೀಡಿಯಾ ಪ್ಲಾಟ್‍ಫಾರ್ಮ್‍ಗಳಲ್ಲಿ ಪೋಸ್ಟ್ ಮಾಡಲಾಗಿದೆ. ಈ ಫೋಟೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ – ಹಾಕದಿದ್ದರೆ 500 ರೂ. ದಂಡ

Share This Article
Leave a Comment

Leave a Reply

Your email address will not be published. Required fields are marked *