– ಉಷ್ಣಾಂಶ ಹೆಚ್ಚಳದಿಂದ ವಿಪರೀತ ಸೆಕೆ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲ ಝಳ (Heatwave) ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ವಿಜ್ಞಾನಿ ಸಿಎಸ್ ಪಾಟೀಲ್ (CS Patil) ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಕರುನಾಡು ಬಿಸಿಲ ಧಗಗೆ ಬಳಲಿ ಬೆಂಡಾಗಿದ್ದು, ರಣಬೇಸಿಗೆಗೆ ಜನ ಹೈರಾಣಾಗಿದ್ದಾರೆ. ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ದಾಟಿದೆ. ಬೆಂಗಳೂರಿನಲ್ಲಿ 36-37 ಡಿಗ್ರಿ ಉಷ್ಣಾಂಶವಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೊಂದು ವಾರ 40-42 ಡಿಗ್ರಿ ಉಷ್ಣಾಂಶ ಇರಲಿದೆ ಎಂದು ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ
ಬೆಂಗಳೂರಿನಲ್ಲಿಯೂ ಉಷ್ಣಾಂಶ ಹೆಚ್ಚಾಗಲಿದೆ. ಹಗಲು ಮಾತ್ರವಲ್ಲ, ರಾತ್ರಿ ವೇಳೆಯಲ್ಲೂ ಉಷ್ಣಾಂಶ ಹೆಚ್ಚಿರುವುದರಿಂದ ವಿಪರೀತ ಸೆಕೆಯಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

