ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ವರುಣ ಮತ್ತೆ ಅಬ್ಬರಿಸಿದ್ದಾನೆ. ಮಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿಬಿದ್ದಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಉಡುಪಿ, ಕೊಡಗಿನಲ್ಲಿ ಇವತ್ತು ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು, ವಿಜಯಪುರ, ಬೀದರ್, ಬಾಗಲಕೋಟೆಯಲ್ಲಿ ಭಾರೀ ಮಳೆಯಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ವಿದ್ಯುತ್ ಸಂಪರ್ಕ ಸ್ಥಗಿಗೊಂಡು ಜನ ಪರದಾಡುತ್ತಿದ್ದಾರೆ. ಇದನ್ನೂ ಓದಿ: ಭಾರೀ ಮಳೆ- ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕರ್ನಾಟಕಕ್ಕೆ ನೀರು ಬಿಡುಗಡೆ
ಅಧಿಕಾರಿಗಳು ಪರಿಷತ್ ಚುನಾವಣೆಯಲ್ಲಿ ಬ್ಯುಸಿಯಾಗಿರೋದ್ರಿಂದ ಯಾರು ಮಳೆ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ. ಕೊಡಗಿನಲ್ಲಿ ಉತ್ತಮ ಮಳೆಯಾಗಿರೋದ್ರಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ನೆರೆಯ ರಾಜ್ಯ ಮಹಾರಾಷ್ಟ್ರದಲ್ಲೂ ಮಳೆಯಾಗ್ತಿರೋದ್ರಿಂದ ವಿಜಯಪುರದ ಭೀಮೆಯ ಒಡಲು ತುಂಬಿ ಹರಿಯುತ್ತಿದೆ. ಇನ್ನು ಐದು ಭಾರಿ ಮಳೆಯಾಗುವುದೆಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ಬೀದರ್ ನಲ್ಲಿ ಭಾರೀ ಮಳೆ: ಸಂಪರ್ಕ ಕಳೆದುಕೊಂಡು ಒದ್ದಾಡುತ್ತಿದ್ದಾರೆ ಗ್ರಾಮಸ್ಥರು