– ನವರಾತ್ರಿಯ ದಾಂಡಿಯಾ ಸಂಭ್ರಮಕ್ಕೆ ಅಡ್ಡಿ ಸಾಧ್ಯತೆ
ಮುಂಬೈ: ಮುಂಬೈ (Mumbai) ಸೇರಿದಂತೆ ಮಹಾರಾಷ್ಟ್ರದ (Maharashtra) ಕೆಲವು ಭಾಗಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿದೆ.
ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪಾಲ್ಘರ್, ಪುಣೆ, ಥಾಣೆ ಮತ್ತು ರಾಯಗಡ್ ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಜಲ್ನಾ, ಬೀಡ್ ಮತ್ತು ಸೋಲಾಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಇದನ್ನೂ ಓದಿ: ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!
ಶನಿವಾರ (ಸೆ.27) ಬೆಳಗ್ಗೆಯಿಂದಲೂ ಮುಂಬೈ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಪಾಲ್ಘರ್, ಥಾಣೆ ಮತ್ತು ರಾಯಗಡ್‌ನಲ್ಲಿ ಸೋಮವಾರದವರೆಗೂ (ಸೆ.29) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಅಲ್ಲದೇ ಅಕ್ಟೋಬರ್ ಎರಡನೇ ವಾರದವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನೂ ನವರಾತ್ರಿ ಹಿನ್ನೆಲೆ ಆಯೋಜಿಸಲಾಗಿದ್ದ ದಾಂಡಿಯಾ ನೈಟ್ ಫೆಸ್ಟಿವಲ್‌ಗೂ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಜೊತೆಗೆ ಸೆ.28ರಂದು ನಡೆಯಬೇಕಿದ್ದ ಮಹಾರಾಷ್ಟç ಲೋಕ ಸೇವಾ ಆಯೋಗ ವತಿಯಿಂದ ಕೆಲ ಪರೀಕ್ಷೆಗಳನ್ನು ಮುಂದೂಡುವುದಾಗಿ ತಿಳಿಸಿದ್ದು, ನ.9ರಂದು ನಡೆಸುವುದಾಗಿ ತಿಳಿಸಿದೆ.
ಇನ್ನೂ ಮಹಾರಾಷ್ಟ್ರದಾದ್ಯಂತ ಭಾರೀ ಮಳೆಯ ಹಿನ್ನೆಲೆ ಮೀನುಗಾರರು ಸಮುದ್ರ, ನದಿ, ಕೆರೆಗಳಿಗೆ ಇಳಿಯದಂತೆ ಸೂಚನೆ ನೀಡಿದೆ.ಇದನ್ನೂ ಓದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್