ರಾಜ್ಯದಲ್ಲಿ ಇನ್ನೂ ಮೂರು ದಿನಗಳವರೆಗೆ ಭಾರೀ ಮಳೆ ಮುನ್ಸೂಚನೆ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ (Rain) ವಿಂಗಡನೆ ಹಿನ್ನೆಲೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

ಶನಿವಾರದಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ. ಇದನ್ನೂ ಓದಿ: ಉರ್ದು, ಪರ್ಷಿಯನ್‌ ಬದಲಿಗೆ ಹಿಂದಿಯಲ್ಲಿ ಮಾತನಾಡಿ: ಪೊಲೀಸರಿಗೆ ರಾಜಸ್ಥಾನ ಸಚಿವ ಸೂಚನೆ

ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ – ವಾಹನ ಸಂಚಾರ ಸಂಪೂರ್ಣ ಬಂದ್

Share This Article