ಚಿಕ್ಕಮಗಳೂರು: ಜಿಲ್ಲೆಯಲ್ಲಿ (Chikkamagaluru) ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಐದು ದಿನ ಅರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಪಶ್ಚಿಮಘಟ್ಟ ಸಾಲಿನಲ್ಲಿ ಚಾರಣ ಮಾಡುವಾಗ ಪ್ರವಾಸಿಗರು ಜಾಗ್ರತೆಯಿಂದ ಇರಬೇಕು. ಗುಡ್ಡ, ಧರೆ ಕುಸಿತದ ಸಂಭವವಿರುವುದರಿಂದ ಸ್ಥಳೀಯರು ಸಹ ಸಾಕಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – 2 ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಜಿಲ್ಲೆಯ ಪ್ರವಾಸಿ ತಾಣಗಳಿಗೆ ವೀಕೆಂಡ್‍ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಸೂಚನೆ ನಿಡಿದೆ. ಇನ್ನೂ ಜಿಲ್ಲೆಯಲ್ಲಿ ಬರುವ ನದಿಗಳ ಪಾತ್ರದಲ್ಲಿರುವ ಜನರು ಸಹ, ನದಿಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಪ್ರವಾಸಿ ಬಸ್ ಪಲ್ಟಿ – 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ