ಬಳ್ಳಾರಿಯಲ್ಲಿ ಧಾರಾಕಾರ ಮಳೆ – ಅಂಚೆ ಕಚೇರಿ, ಅಂಡರ್ ಪಾಸ್‌ಗಳಲ್ಲಿ ನೀರು, ವಾಹನ ಸವಾರರ ಪರದಾಟ

Public TV
1 Min Read

ಬಳ್ಳಾರಿ: ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ

ಬಳ್ಳಾರಿ (Ballary) ನಗರ ಸೇರಿದಂತೆ ಜಿಲ್ಲೆಯ ಸಿರುಗುಪ್ಪ, ಕಂಪ್ಲಿ ಕುರುಗೋಡು ತಾಲೂಕಿನಲ್ಲಿ ವರುಣ ಅಬ್ಬರಿಸಿದ್ದಾನೆ. ಭಾರೀ ಮಳೆಯಿಂದಾಗಿ ಬಳ್ಳಾರಿ ಅಂಚೆ ಕಚೇರಿ ಆವರಣದೊಳಗೆ ನೀರು ನುಗ್ಗಿದೆ. ನೀರಿದ್ದರೂ ಕೂಡ ಕಚೇರಿಗೆ ಬರುವ ಅನಿವಾರ್ಯತೆ ಎದುರಾಗಿದ್ದರಿಂದ ಜನರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಮತ್ತೊಂದೆಡೆ ಕಟ್ಟಡ ಕಾರ್ಮಿಕರಿಗಾಗಿ ಬಂದಿರುವ ಕೆಲ ಸಲಕರಣೆಗಳು ನೀರಿನಲ್ಲಿ ಮುಳುಗಿ ಹೋಗಿವೆ.

ಇನ್ನೂ ನಗರದ ಬಹುತೇಕ ಏರಿಯಾಗಳಿಗೆ ಸಂಪರ್ಕ ಕಲ್ಪಿಸುವ ಸತ್ಯನಾರಾಯಣ ಪೇಟೆ ಅಂಡರ್ ಪಾಸ್‌ನಲ್ಲಿ ನೀರು ನಿಂತಿರುವುದರಿAದ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದರಿಂದಾಗಿ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರು ನಡುನೀರಿನಲ್ಲಿಯೇ ಸಂಚರಿಸಲು ವಿಫಲ ಪ್ರಯತ್ನ ಮಾಡುತ್ತಿದ್ದಾರೆ.ಇದನ್ನೂ ಓದಿ: ಬೆಂಗಳೂರಿಗೆ ಯಲ್ಲೋ ಅಲರ್ಟ್ – ಮುಂದಿನ 3 ಗಂಟೆ ಭಾರೀ ಮಳೆ

Share This Article