ಬಳ್ಳಾರಿ- ಮಳೆಯ ನೀರಿನಲ್ಲೇ ಶಿಕ್ಷಕರ ದಿನಾಚರಣೆ!

Public TV
1 Min Read

ಬಳ್ಳಾರಿ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಳಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತುಂಬೆಲ್ಲಾ ನೀರು ನುಗ್ಗಿದೆ. ಹೀಗಾಗಿ ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಮಳೆಯ ನೀರಿನಲ್ಲೇ ಶಿಕ್ಷಕರ ದಿನಾಚರಣೆ ಆಚರಿಸಿದ್ದಾರೆ.

ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಸುಮಾರು 3 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಹೊಸಪೇಟೆ ತಾಲೂಕಿನಲ್ಲಿ ಸಾಕಷ್ಟು ಪ್ರಮಾಣದ ಬೆಳೆ ಜಲಾವೃತಗೊಂಡಿದೆ.

ಹೊಸಪೇಟೆ ತಾಲೂಕಿನ ಜಂಬುನಾಥನಹಳ್ಳಿ, ಕಲ್ಲಹಳ್ಳಿ, ವೆಂಕಟಗೀರಿ, ರಾಜಾಪುರ, ಕಮಲಾಪುರ, ರಾಯರ ಕೆರೆ, ನಾಗಲಾಪುರ, ಗರಗ, ಡಿಎನ್‍ಕೆರೆ ಮರಿಯಮ್ಮನಹಳ್ಳಿ ಮಾಗಾಣಿ ಸೇರಿ ಹಲವು ಗ್ರಾಮಗಳ ಅಪಾರ ಪ್ರಮಾಣದಲ್ಲಿ ಬೆಳೆದ ಕಬ್ಬು ಬತ್ತ ಬಾಳೆ ಬೆಳೆ ನೀರಿನಲ್ಲಿ ಜಲಾವೃತಗೊಂಡಿವೆ.

ಜಿಲ್ಲೆಯ ಸಂಡೂರು ತಾಲೂಕಿನ ತಾರಾನಗರದಲ್ಲಿನ ಹಳ್ಳ ತುಂಬಿ ಹರಿದ ಪರಿಣಾಮ ಗ್ರಾಮದ ತಗ್ಗು ಪ್ರದೇಶದ ಮನೆಗಳಿಗೆಲ್ಲಾ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

Share This Article
Leave a Comment

Leave a Reply

Your email address will not be published. Required fields are marked *