ಬೆಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಜನ ತತ್ತರ – ಧರೆಗುರುಳಿದ ಭಾರೀ ಮರಗಳು

Public TV
2 Min Read

ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನಗರದ ಹಲವೆಡೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ ಉಂಟಾಗಿದೆ. ಭಾರೀ ಗಾತ್ರದ ಮರಗಳೂ ವರುಣ ಆರ್ಭಟಕ್ಕೆ ಧರೆಗುರುಳಿದ್ದು, ಅವುಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಗರಪಾಲಿಕೆ ಮುಂದಾಗಿದೆ.

RAIN

ಕೆಲ ದಿನಗಳಿಂದ ಕೊಂಚ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದೆ. ನಿನ್ನೆ ಬೆಂಗಳೂರಿನಲ್ಲಿ ಸೃಷ್ಟಿಸಿದ ಅವಾಂತರಗಳು ಇದಕ್ಕೆ ಸಾಕ್ಷಿಯಾಗಿದೆ. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಯಾಗಿವೆ. ಇದನ್ನೂ ಓದಿ: ಪಿಎಸ್‍ಐ ಹಗರಣ: ಓರ್ವ ಪೊಲೀಸ್ ಪೇದೆ ಸೇರಿ ಬಂಧಿತರ ಸಂಖ್ಯೆ 39ಕ್ಕೆ ಏರಿಕೆ

ನಗರದ ವಿವಿಧೆಡೆ 8 ಮರಗಳು ಧರೆಗುರುಳಿವೆ. ಕೆ.ಜಿ.ರಸ್ತೆಯಲ್ಲಿ ಬಿದ್ದಿದ್ದ ಬೃಹತ್ ಮರದಿಂದ ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿತ್ತು. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

RAIN (2)

ಪ್ರಶಾಂತ್ ನಗರ, ಶೋಭಾ ಆಸ್ಪತ್ರೆ ಬಳಿ, ಶ್ರೀರಾಂಪುರ, ಕೆ.ಜಿ.ರಸ್ತೆ ಗಾಂಧಿನಗರ, ಲಿಂಕ್ ರೋಡ್ ಮಲ್ಲೇಶ್ವರ, ಸುಬ್ರಮಣ್ಯನಗರ ಹಾಗೂ ರಾಜಾಜೀನಗರದಲ್ಲಿ ತಲಾ ಒಂದೊಂದು ಮರಗಳು ನೆಲಕಚ್ಚಿದ್ದವು. ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಇದನ್ನೂ ಓದಿ: ಪಿಎಸ್‍ಐ ಅಕ್ರಮ: ಸಿಐಡಿಗೆ ಶರಣಾದ ಆರೋಪಿ ಮಂಜುನಾಥ್

ಉತ್ತರಹಳ್ಳಿ, ಕೆ.ಪಿ.ಅಗ್ರಹಾರ ಫಿಶ್ ಮಾರ್ಕೆಟ್ ಬಳಿ ಮನೆಗೆ ನೀರು ನುಗ್ಗಿದ್ದ ದೃಶ್ಯಗಳು ಕಂಡುಬಂದವು. ಅಲ್ಲದೆ, ಸಂಗೋಳ್ಳಿ ರಾಯಣ್ಣ ರೈಲ್ವೆ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿತ್ತು. ಪೈಪ್‌ಲೈನ್ ರಸ್ತೆ ಮಲ್ಲೇಶ್ವರಂ ಬಳಿ ಮನೆಗೆ ನುಗ್ಗಿದ ನೀರು ಸಂಪೂರ್ಣ ತೆರವುಗೊಳಿಸುವಲ್ಲಿ ತಡರಾತ್ರಿ ಕಳೆದಿತ್ತು.

RAIN

ಎಲ್ಲೆಲ್ಲಿ ಎಷ್ಟು ಮಿ.ಮೀ ಮಳೆಯಾಗಿದೆ..?
ಬೆಂಗಳೂರು – 20 ರಿಂದ 79, ವಿದ್ಯಾಪೀಠ – 79, ಸಂಪಂಗಿ ರಾಮನಗರ – 68,  ರಾಜಮಹಲ್ ಗುಟ್ಟಹಳ್ಳಿ – 67.5, ಬಿಳೇಕಹಳ್ಳಿ – 63, ಅರಕೆರೆ – 61, ದೊರೆಸಾನಿ ಪಾಳ್ಯ – 51,  ವಿವಿ ಪುರಂ – 51, ದಯಾನಂದ ನಗರ – 49.5, ಪುಲಕೇಶಿನಗರ – 47, ನಾಯಂಡಹಳ್ಳಿ – 46.5, ಹೆಮ್ಮಿಗೆ ಪುರ – 42.5, ಕುಮಾರಸ್ವಾಮಿ ಲೇಔಟ್ – 40, ಉತ್ತರಹಳ್ಳಿ – 32 ಮಿ.ಮೀ ನಷ್ಟು ಮಳೆಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *